'ಪ್ರತಿಬಂಧಕ ಮಸೂದೆ ಜಾರಿಯಾಗಲಿ'
ಕ.ಪ್ರ. ವಾರ್ತೆ, ಸಾಗರ, ನ.11
ಮೂಢನಂಬಿಕೆ ಪ್ರತಿಬಂಧಕ ಮಸೂದೆ ಜಾರಿಯಾಗಬೇಕು ಹಾಗೂ ಶಾದಿಭಾಗ್ಯ ಯೋಜನೆ ಎಲ್ಲ ಬಡವರಿಗೂ ವಿಸ್ತರಣೆಯಾಗಬೇಕು ಎಂದು ಒತ್ತಾಯಿಸಿ ಇಲ್ಲಿನ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಮುಖಂಡ ಪರಮೇಶ್ವರ ದೂಗೂರು ಮಾತನಾಡಿ, ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಸರ್ಕಾರದ ಮಟ್ಟದಲ್ಲಿ ಮಸೂದೆಯ ಕರಡು ಪ್ರತಿಯಷ್ಟೇ ಪ್ರಸ್ತಾಪವಾಗಿದೆ. ಕೆಲವು ರಾಜಕೀಯ ಪಕ್ಷಗಳು, ಸಂಘ ಪರಿವಾರದವರು ಅದೊಂದು ಧಾರ್ಮಿಕ ವಿರೋಧಿ ಮಸೂದೆ ಎಂದು ಬಿಂಬಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಧರ್ಮದ ಹೆಸರಿನಲ್ಲಿ ಕಂದಾಚಾರಗಳನ್ನು ಹುಟ್ಟುಹಾಕುವ ಪ್ರಕ್ರಿಯೆ ಸಮಾಜದಲ್ಲಿ ಇಂದಿಗೂ ಜೀವಂತವಾಗಿದೆ. ಇದನ್ನು ನಿಲ್ಲಿಸಬೇಕಾದರೆ ಸರ್ಕಾರ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಎಲ್ಲರಿಗೂ ವಿಸ್ತರಿಸಿ: ಸರ್ಕಾರ ಮದುವೆ ಇನ್ನಿತರ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸುವ ನಿಟ್ಟಿನಲ್ಲಿ ಕಾಯ್ದೆ ಜಾರಿಗೆ ತರಬೇಕು. ಈಗ ಶಾದಿಭಾಗ್ಯ ಯೋಜನೆ ಜಾರಿಗೆ ತಂದಿರುವುದು ಸಮರ್ಪಕವಾಗಿದ್ದರೂ ಅದನ್ನು ಎಲ್ಲ ಬಡವರ್ಗದವರಿಗೂ ವಿಸ್ತರಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಅಲ್ಪಸಂಖ್ಯಾತರಿಗೆ ಮಾತ್ರ ಶಾದಿಭಾಗ್ಯ ಯೋಜನೆ ಜಾರಿಗೆ ತಂದಿರುವುದು ಖಂಡನೀಯ. ಎಲ್ಲಾ ಧರ್ಮದಲ್ಲೂ ಬಡವರಿದ್ದಾರೆ. ಎಲ್ಲರಿಗೂ ಈ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ ಮಾತನಾಡಿ, ಸಮಾಜದಲ್ಲಿ ಇಂದಿಗೂ ಮೂಢನಂಬಿಕೆ ತಾಂಡವವಾಡುತ್ತಿದ್ದು, ಮುಗ್ಧ ಜನರು ಇದಕ್ಕೆ ಬಲಿಪಶುವಾಗುತ್ತಿದ್ದಾರೆ ಎಂದರು.
ಪರಮೇಶ್ವರ ಹೊಸಕೊಪ್ಪ, ಕನ್ನಪ್ಪ ಬೆಳಲಮಕ್ಕಿ, ಹಿರಿಯಣ್ಣ, ಮಂಜುನಾಥ ಗೌಡ, ನಂಜುಂಡಪ್ಪ ಕೆ., ಮಹದೇವಮ್ಮ, ಟಿ.ವಿ. ಮಲ್ಲೇಶಪ್ಪ ಇನ್ನಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

