ಸಂಘಟನೆ ಬಲಪಡಿಸಿದರೆ ಸಮಾಜ ಬಲಿಷ್ಠ: ಶ್ರೀ
ಭದ್ರಾವತಿ: ಆಂತರಿಕ ಭಿನ್ನಾಭಿಪ್ರಾಯಗಳನ್ನು ತೊಡೆದು ಸಂಘಟನೆಯನ್ನು ಬಲಪಡಿಸುವುದರಿಂದ ಮಾತ್ರ ಯಾವುದೇ ಸಮಾಜ ಬಲಿಷ್ಠಗೊಳ್ಳಲು ಸಾಧ್ಯ ಎಂದು ಚಿತ್ರದುರ್ಗದ ಮಾಚಿದೇವ ಮಹಾಸಂಸ್ಥಾನ ಮಠದ ಬಸವ ಮಾಚಿದೇವ ಸ್ವಾಮೀಜಿ ಹೇಳಿದರು.
ಶ್ರೀ ಗುರುವೀರ ಮಡಿವಾಳಮಾಚಿದೇವ ಸಂಘ ಸಿದ್ಧಾರೂಢ ನಗರದ ಕಾಳಿದಾಸ ಬಡಾವಣೆಯಲ್ಲಿ ಏರ್ಪಡಿಸಿದ್ದ ಗುರುಮಾಚಿದೇವರ 40ನೇ ವರ್ಷದ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ, ಮಾಚಿದೇವ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆಯ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಒಳಿತಿಗಾಗಿ ಅಗತ್ಯವಾದ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕಾದರೆ ಮೊದಲು ಸಮಾಜ ಶಕ್ತಿಯುತವಾಗಿ ಸಂಘಟಿತವಾಗಬೇಕು ಎಂದರು.
ಕುಲಕಸುಬು ಮರೆಯಬೇಡಿ: ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ, ಕುಲಕಸುಬನ್ನು ಕಡೆಗಣಿಸದೆ ಅದರಲ್ಲಿಯೂ ಸಹ ಉತ್ತಮ ಲಾಭ ಪಡೆಯುವತ್ತ ಮಡಿವಾಳ ಸಮಾಜ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಸಮಾಜದ ಎಲ್ಲ ಜನರವಸ್ತ್ರಗಳ ಕೊಳಕನ್ನು ತೊಳೆಯುವ ಕಾಯಕ ಮಾಡುವ ಮಡಿವಾಳ ಜನಾಂಗ, ಅದೇ ರೀತಿ ಕೇಶವಿನ್ಯಾಸ ಮಾಡುವ ಸವಿತಾ ಸಮಾಜ ಜನಾಂಗ ತಮ್ಮ ಕೆಲಸವನ್ನು ನಿಲ್ಲಿಸಿದರೆ ಇಡೀ ಸಮಾಜ ಹೇಗಿರುತ್ತದೆ ಎಂಬುದನ್ನು ಊಹಿಸಿಕೊಳ್ಳಲು ಅಸಾಧ್ಯ. ಹಿಂದುಳಿದ ವರ್ಗದ ಜನರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಅವರಲ್ಲಿ ಕುಲಕಸುಬಿನ ಬಗ್ಗೆ ಸಹ ಗೌರವಾಧಾರಗಳನ್ನು ಬೆಳಸುವ ಅಗತ್ಯವಿದೆ ಎಂದರು.
ವಿದ್ಯಾರ್ಥಿನಿಲಯದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಶಾಸಕ ಎಂ.ಜೆ. ಅಪ್ಪಾಜಿ, ವಿದ್ಯಾರ್ಥಿ ನಿಲಯದ ನಿರ್ಮಾಣಕ್ಕೆ ಶಾಸಕರ ಅನುದಾನದಿಂದ 10 ಲಕ್ಷ ನೀಡುವುದಾಗಿ ಭರವಸೆ ನೀಡಿದರು.
ಮಾಜಿ ಶಾಸಕ ಬಿ.ಕೆ. ಸಂಗಮೇಶ್ವರ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯಾನಾಯ್ಕ, ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ನಂಜಪ್ಪ, ಗುಲ್ಬರ್ಗ ವಿ.ವಿ. ರಿಜಿಸ್ಟ್ರಾರ್ ಡಾ. ದಯಾನಂದ, ಲೋಕಾಯುಕ್ತ ಜಿಲ್ಲಾ ಇನ್ಸ್ಪೆಕ್ಟರ್ ಪುರುಷೋತ್ತಮ, ನಗರಸಭಾ ಸದಸ್ಯರಾದ ಆನಂದ್ ಶಿವರಾಜ್, ಜಿ.ಡಿ. ನಟರಾಜ್, ಮಂಗೋಟೆ ಗ್ರಾ.ಪಂ. ಅಧ್ಯಕ್ಷೆ ಆಶಾ ರಮೇಶ್, ಪ್ರಸನ್ನಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ಟಿ. ಬಾಲಾಜಿ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

