ಶಿವಮೊಗ್ಗ

ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ

Published On :

ಶಿವಮೊಗ್ಗ: ಕೊಪ್ಪಳದ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರನ್ನು ತೇಜೋವಧೆ ಮಾಡಲು ಈ ಪದಗಳನ್ನು ಬಳಸಿಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಪ್ರಧಾನಿ ಅವರ ಆಡಳಿತ ವೈಖರಿಯನ್ನು ಟೀಕೆ ಮಾಡಿದ್ದೇನೆ ಅಷ್ಟೇ. ನಾನು ಬಳಸಿರುವ ಪದಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ದೇಶದಲ್ಲಿ ಪ್ರತಿ ನಿತ್ಯ ಭಯೋತ್ಪಾದಕರ ಗುಂಡಿಗೆ ಬಲಿಯಾಗುತ್ತಿರುವ ಯೋಧರ ಬಗ್ಗೆ ಚಿಂತಿಸುವಂತೆ ಸಲಹೆ ನೀಡಿದರು.
ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಲಿ: ಗಡಿಯಲ್ಲಿ ಭಯೋತ್ಪಾದಕರ ಹಾವಳಿ ಮಿತಿ ಮೀರಿದ್ದು, ದೇಶಕ್ಕೆ ರಕ್ಷಣೆ ನೀಡುವಲ್ಲಿ ಯುಪಿಎ ಸರ್ಕಾರ ವಿಫಲವಾಗಿರುವುದು ನಿಜ. ದೇಶವನ್ನು ಪಣಕ್ಕಿಡುವುದು ಕಾಂಗ್ರೆಸ್ ಸಂಸ್ಕೃತಿ. ದೇಶದ ರಕ್ಷಣೆ ಮಾಡುವುದು ಬಿಜೆಪಿ ಸಂಸ್ಕೃತಿ. ರಾಷ್ಟ್ರದ ಭದ್ರತೆ ವಿಷಯದಲ್ಲಿ ರಾಜಕೀಯ ಮಾಡುವುದು ಬಿಟ್ಟು ಕಾಂಗ್ರೆಸ್ ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.
ನಮ್ಮ ನಾಲಿಗೆ ಸರಿಯಿಲ್ಲ ಎಂದು ಹೇಳಿದ್ದ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಯಾರ ನಾಲಿಗೆ ಸರಿಯಿದೆ ಎಂಬುದನ್ನು ರಾಜ್ಯದ ಜನರು ತೀರ್ಮಾನಿಸುತ್ತಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರವಾದಿಗಳ ಕೋಟೆಯಿಂದ ಹೊರಬರಬರಬೇಕು. ವಿಚಾರವಾದಿಗಳ ಅಭಿಪ್ರಾಯ ಕೇಳಿಕೊಂಡು ಸಿಎಂ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿದ್ದಾರೆ. ಧಾರ್ಮಿಕ ವಿಧಿ-ವಿಧಾನಗಳ ಮೇಲೂ ಕಟ್ಟುಪಾಡು ವಿಧಿಸಲು ಮುಂದಾಗಿದ್ದಾರೆ. ಜನರಿಗೆ ಧಾರ್ಮಿಕ ಹಕ್ಕು ಸಂವಿಧಾನಬದ್ಧವಾಗಿ ಸಿಕ್ಕಿದೆ. ಇದನ್ನು ಮೊಟಕುಗೊಳಿಸಲು ಯಾರೂ ಮುಂದಾಗಬಾರದು ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.