ಉಗ್ರಪ್ಪನವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ: ಆಯನೂರು
ಕ.ಪ್ರ.ವಾರ್ತೆ, ಶಿವಮೊಗ್ಗ, ನ.12 ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡಿರುವ ಕಾಂಗ್ರೆಸ್ ನಾಯಕ ಉಗ್ರಪ್ಪನವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ವಿಶೇಷ ಆಸಕ್ತಿ ತೋರಿಸಬೇಕು ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಗ್ರಪ್ಪನವರಿಗೆ ಅಗತ್ಯ ಚಿಕಿತ್ಸೆ ಬೆಂಗಳೂರಿನಲ್ಲಿ ಸಿಗದೇ ಹೋಗಬಹುದು. ಹೀಗಾಗಿ ಶಿವಮೊಗ್ಗಕ್ಕೆ ಕಳುಹಿಸಿ ಕೊಡಲಿ. ಇಲ್ಲಿ ಮೂವರು ಅಂತಾರಾಷ್ಟ್ರೀಯ ಮಟ್ಟದ ಮಾನಸಿಕ ತಜ್ಞ ವೈದ್ಯರಿದ್ದಾರೆ. ನಾವು ಚಿಕಿತ್ಸೆ ಕೊಡಿಸಿ ಕಳುಹಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಜನರೇ ಹಣ: ನರೇಂದ್ರ ಮೋದಿಯವರ ಕುರಿತು ಉಗ್ರಪ್ಪನವರು ಹಣಕಾಸು ಅವ್ಯವಹಾರದ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಆಯನೂರು ಮಂಜುನಾಥ್, ಬಿಜೆಪಿ ರ್ಯಾಲಿಗೆ ಸ್ವಯಂಪ್ರೇರಿತರಾಗಿ ಜನರೇ ಹಣ ನೀಡುತ್ತಿದ್ದಾರೆ. ಇದು ಕಾಂಗ್ರೆಸ್ನವರಿಗೆ ಸಹಿಸದಂತಾಗಿದೆ. ಮನೋರೋಗಿಗಳಂತೆ ಬಾಯಿಗೆ ಬಂದಿದ್ದು ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ನಾಯಕ ಉಗ್ರಪ್ಪ ನನ್ನ ಸ್ನೇಹಿತ. ಬೆಂಗಳೂರು ಸಮಾವೇಶ ನೋಡಿ ಅನರಿಗೆ ಇನ್ನೇನಾಗುತ್ತೋ. ಹೀಗಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಒಳಿತು. ಹೀಗಾಗಿಯೇ ಅವರಿಗೆ ಸಲಹೆ ನೀಡುತ್ತಿದ್ದೇನೆ ಎಂದರು.
ಭಟ್ಟಂಗಿ ಸಮಸ್ಯೆ: ಬಿ.ಎಸ್. ಯಡಿಯೂರಪ್ಪನವರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಆದರೆ, ಯಡಿಯೂರಪ್ಪನವರ ಜೊತೆಗಿರುವ ಕೆಲವು ಭಟ್ಟಂಗಿಗಳು ಅವರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆಯನೂರು ಟೀಕಿಸಿದರು. ಲೋಕಸಭಾ ಟಿಕೆಟ್ ರಾಘವೇಂದ್ರ ಅವರಿಗೆ ಬಿಜೆಪಿಯವರು ಕೊಡುತ್ತಾರೋ ಇಲ್ಲವೋ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಆಯನೂರು ಮಂಜುನಾಥ್, ಬಿಎಸ್ವೈ ಹೇಳಿಕೆ ಯಾವ ರಾಜಕೀಯ ಶೈಲಿಯೋ ಅರ್ಥವಾಗುತ್ತಿಲ್ಲ. ರಾಜಕೀಯಕ್ಕೆ ಹೊಸ ವ್ಯಾಖ್ಯಾನ ಕೊಡಲು ಅವರು ಹೊರಟಿದ್ದಾರೆಂದು ಲೇವಡಿ ಮಾಡಿದರು.ಮೋದಿ ಬೆಂಗಳೂರು ಕಾರ್ಯಕ್ರಮದ ಕುರಿತು ಜಿಲ್ಲೆಯಲ್ಲಿ ತಯಾರಿ ನಡೆಯುತ್ತಿದೆ.
ವಿಪ ಸದಸ್ಯ ಸಿದ್ದರಾಮಣ್ಣ, ಎಂ.ಬಿ. ಭಾನುಪ್ರಕಾಶ್, ದತ್ತಾತ್ರಿ, ಡಿ.ಎಸ್. ಅರುಣ್ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

