ಶಿವಮೊಗ್ಗ

ಡಾಕ್ಟರೇಟ್ ಪದವಿ ಪ್ರದಾನ

Published On :

ಶಿವಮೊಗ್ಗ: ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನಗಲ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಿ.ಜೆ. ರಮೇಶ್ ನಾಯಕ್ರವರು ಬೆಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸುಂದರರಾಜ್ ಅರಸ್ರವರ ಮಾರ್ಗದರ್ಶನದಲ್ಲಿ ಮಂಡಿಸಿದ ಭಾರತೀಯ ಕ್ರೀಡೆಗಳ ಮೇಲೆ ಪಾಶ್ಚಿಮಾತ್ಯ ಕ್ರೀಡೆಗಳ ಪ್ರಭಾವ ಮತ್ತು ಅದರ ಪರಿಣಾಮಗಳು ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಾರಂಭ
ಶಿವಮೊಗ್ಗ: ಜಿಲ್ಲಾ ಚುನಾವಣಾ ಶಾಖೆ  ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರುಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ, ಬಿಟ್ಟುಬಿಡುವಿಕೆ ಕುರಿತು ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕೈಗೊಳ್ಳಲಿದೆ. ಪ್ರಕಟಿತ ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರು ನ. 29ರವರೆಗೆ ಹಕ್ಕು ಹಾಗೂ ಆಕ್ಷೇಪಣೆ ಸಲ್ಲಿಸಬಹುದು. ನ. 17ರಂದು ಹಕ್ಕು ಮತ್ತು ಆಕ್ಷೇಪಣೆಗಳು ಸ್ವೀಕರಿಸುವುದಕ್ಕೆ ರಾಜಕೀಯ ಪಕ್ಷಗಳ, ಬೂತ್ ಹಂತದ ಏಜೆಂಟರುಗಳೊಂದಿಗೆ ವಿಶೇಷ ಪ್ರಚಾರಾಂದೋಲನ ನಡೆಯಲಿದೆ. ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಡಿ. 21ರಂದು ಇತ್ಯರ್ಥ ಪಡಿಸಲಾಗುವುದು. 2014ರ ಜನವರಿ 6ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಮತದಾರರು ಹೆಚ್ಚಿನ ವಿವರಗಳಿಗಾಗಿ ಹಾಗೂ ನಿಗದಿತ ಅರ್ಜಿ ನಮೂನೆಗಳಿಗಾಗಿ ತಮ್ಮ ಸಮೀಪದ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಹವಾಲು ಸ್ವೀಕಾರ
ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ನ.16ರಂದು ಬೆಳಗ್ಗೆ 11ರಿಂದ 1.30ರವರೆಗೆ ಸೊರಬ ತಾಲೂಕಿನ ಆನವಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳ ಕುರಿತು ಆಗುತ್ತಿರುವ ಅನಗತ್ಯ ವಿಳಂಬ, ಮತ್ತಿತರ ಸಮಸ್ಯೆಗಳಿದ್ದಲ್ಲಿ ನಿಗದಿತ ದಿನಾಂಕ, ಸಮಯ ಮತ್ತು ಸ್ಥಳಗಳಲ್ಲಿ ಖುದ್ದಾಗಿ ಹಾಜರಿದ್ದು, ದೂರುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಶೀರೂರು ಮತ್ತು ಹೊನ್ನೇಕೇರಿ 2 ಅಂಗನವಾಡಿ ಕಾರ್ಯಕರ್ತೆಯರ, ಕುಂದಾ, ಹುಂಚದಕಟ್ಟೆ,  ಹೊರಣೇಬೈಲು, ಹೊದಲಾಕುಟ್ರ 4 ಅಂಗನವಾಡಿ ಸಹಾಯಕಿಯರ ಹಾಗೂ ಅರುಣಗಿರಿ, ಪಟ್ರುವಳ್ಳಿ, ಮುಡುಬ, ಮಾನಿಕೊಪ್ಪ ಗ್ರಾಮಗಳ 4 ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಗೌರವಧನ ಆಧಾರದ ಮೇಲೆ ಸೇವೆ ಸಲ್ಲಿಸಲು ಆಸಕ್ತಿ ಇರುವ ಅರ್ಹ ಮಹಿಳಾ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಡಿ. 13ರೊಳಗಾಗಿ ತೀರ್ಥಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.