ಶಿವಮೊಗ್ಗ

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಾರಂಭ

Published On :

ಶಿವಮೊಗ್ಗ: ಜಿಲ್ಲಾ ಚುನಾವಣಾ ಶಾಖೆ  ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರುಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ, ಬಿಟ್ಟುಬಿಡುವಿಕೆ ಕುರಿತು ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕೈಗೊಳ್ಳಲಿದೆ. ಪ್ರಕಟಿತ ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರು ನ. 29ರವರೆಗೆ ಹಕ್ಕು ಹಾಗೂ ಆಕ್ಷೇಪಣೆ ಸಲ್ಲಿಸಬಹುದು. ನ. 17ರಂದು ಹಕ್ಕು ಮತ್ತು ಆಕ್ಷೇಪಣೆಗಳು ಸ್ವೀಕರಿಸುವುದಕ್ಕೆ ರಾಜಕೀಯ ಪಕ್ಷಗಳ, ಬೂತ್ ಹಂತದ ಏಜೆಂಟರುಗಳೊಂದಿಗೆ ವಿಶೇಷ ಪ್ರಚಾರಾಂದೋಲನ ನಡೆಯಲಿದೆ. ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಡಿ. 21ರಂದು ಇತ್ಯರ್ಥ ಪಡಿಸಲಾಗುವುದು. 2014ರ ಜನವರಿ 6ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಮತದಾರರು ಹೆಚ್ಚಿನ ವಿವರಗಳಿಗಾಗಿ ಹಾಗೂ ನಿಗದಿತ ಅರ್ಜಿ ನಮೂನೆಗಳಿಗಾಗಿ ತಮ್ಮ ಸಮೀಪದ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ ್ದಾರೆ.
ಅಹವಾಲು ಸ್ವೀಕಾರ
ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ನ.16ರಂದು ಬೆಳಗ್ಗೆ 11ರಿಂದ 1.30ರವರೆಗೆ ಸೊರಬ ತಾಲೂಕಿನ ಆನವಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳ ಕುರಿತು ದೂರುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.