ಗೋವಿಂದೇಗೌಡರಿಗೆ ಸಹ್ಯಾದ್ರಿ ಪ್ರಶಸ್ತಿ
ಕ.ಪ್ರ.ವಾರ್ತೆ, ತೀರ್ಥಹಳ್ಳಿ, ನ.13 ರೈತಾಪಿ ಕುಟುಂಬದ ಯುವಕರು ಕೃಷಿ ಬದುಕಿನಿಂದ ವಿಮುಖರಾಗುತ್ತಿದ್ದು, ಕೃಷಿ ಬದುಕು ನಾಶವಾಗದಂತೆ ಈ ಯುವಕರು ಬದುಕು ರೂಪಿಸಿಕೊಳ್ಳುವ ಅಗತ್ಯವಿದೆ ಎಂದು ಮಲೆನಾಡ ಗಾಂಧಿ, ಮಾಜಿ ಶಿಕ್ಷಣ ಸಚಿವ ಎಚ್.ಜಿ. ಗೋವಿಂದೇಗೌಡ ಅಭಿಪ್ರಾಯಪಟ್ಟರು.
ಬೆಂಗಳೂರಿನ ಸಹ್ಯಾದ್ರಿ ಸಂಘ ಕುಪ್ಪಳಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಹ್ಯಾದ್ರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಬದುಕು ಗೊತ್ತುಗುರಿಗಳನ್ನು ನಾವೇ ರೂಪಿಸಿಕೊಂಡು ಕ್ರಿಯಾಶೀಲರಾಗಿ ಬದುಕಬೇಕಾಗುತ್ತದೆ ಎಂದರು.
ಮಾಜಿ ಶಾಸಕ ಕೋಣಂದೂರು ಲಿಂಗಪ್ಪನವರಿಗೂ ಇದೇ ಸಂದರ್ಭದಲ್ಲಿ ಸಹ್ಯಾದ್ರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಪುಣ್ಯ ಕ್ಷೇತ್ರಕ್ಕೆ ಪ್ರವಾಸಕ್ಕಾಗಿ ಬರುವ ಸಾಹಿತ್ಯಾಸಕ್ತರಿಗೆ ಕುವೆಂಪು ಕೃತಿಗಳು ಕಡಮೆ ಬೆಲೆಯಲ್ಲಿ ದೊರಕುವಂತೆ ಆಗಬೇಕು ಎಂದು ಹೇಳಿದರು.
ಸನ್ಮಾನಿತರಿಗೆ ಸಹ್ಯಾದ್ರಿ ಪ್ರಶಸ್ತಿ ಪ್ರದಾನ ಮಾಡಿದ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಶಾಸನ ರಚಿಸುವ ಶಾಸಕರೂ ಅಧ್ಯಯನ ಪ್ರವೃತ್ತರಾಗಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು. ಗೋವಿಂದೇ ಗೌಡರಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೂ, ಶಿಕ್ಷಣ ಸಚಿವನಾಗಿ ಈ ಕ್ಷೇತ್ರದಲ್ಲಿ ಒಂದಿಷ್ಟು ಪ್ರಾಮಾಣಿಕ ಸೇವೆ ಮಾಡುವ ಮನಸ್ಸಿದೆ ಎಂದು ಹೇಳಿದರು.
ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಹಂ.ಪ. ನಾಗರಾಜಯ್ಯ, ಸಹ್ಯಾದ್ರಿ ಸಂಘದ ಅಧ್ಯಕ್ಷ ರವೀಂದ್ರನಾಥ ಟ್ಯಾಗೋರ್, ಶ್ರೀಮತಿ ಗಿರಿಜಾ ನಿಂಗಪ್ಪ, ಶ್ರೀಮತಿ ಶಾಂತಮ್ಮ ಗೋವಿಂದೇಗೌಡರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

