ಗ್ರಾಪಂ ಉಪಾಧ್ಯಕ್ಷರ ಮೇಲೆ ಶಾಸಕರ ಹಿಬಾಲಕರ ಹಲ್ಲೆ
ಭದ್ರಾವತಿ: ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಗ್ರಾಪಂ ಉಪಾಧ್ಯಕ್ಷರ ಮೇಲೆ ಶಾಸಕ ಎಂ.ಜೆ. ಅಪ್ಪಾಜಿಯವರ ಹಿಂಬಾಲಕರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮಾಜಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ನೇತೃತ್ವದಲ್ಲಿ ಗ್ರಾಪಂ ಸದಸ್ಯರು ಮತ್ತು ಸಿಬ್ಬಂದಿ ತಾಪಂ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬಿ.ಕೆ.ಸಂಗಮೇಶ್ವರ ಅಪ್ಪಾಜಿ ಶಾಸಕರಾಗಿ ಅಧಿಕಾರ ವಹಿಸಿಕೊಂಡ 6 ಆರು ತಿಂಗಳಲ್ಲಿ ಕ್ಷೇತ್ರದಲ್ಲಿ ಅವರ ಹಿಂಬಾಲಕರು ಗೂಂಡಾಗಿರಿ ಪ್ರಾರಂಭಿಸಿದ್ದಾರೆಂದು ಆರೋಪಿಸಿದರು.
ಭೂಕಬಳಿಕೆ: ಕಾನೂನು ಬಾಹಿರವಾಗಿ ಭೂ ಕಬಳಿಕೆ ಮಾಡಿರುವುದನ್ನು ಪ್ರಶ್ನಿಸಿದ ಹುಣಸೆಕಟ್ಟೆ ಗ್ರಾಪಂ ಉಪಾಧ್ಯಕ್ಷರ ಮೇಲೆ ಶಾಸಕರ ಹಿಂಬಾಲಕರು ಹಲ್ಲೆ ನಡೆಸಿದ್ದಾರಲ್ಲದೆ, ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇವರ ಹಾವಳಿಯನ್ನು ತಡೆಯಲು ಕಾರ್ಯಾಚರಣೆ ನಡೆಸುವ ಸರ್ಕಾರಿ ಸಿಬ್ಬಂದಿ ಮೇಲೂ ಕೈ ಮಾಡಿರುವ ಉದಾಹರಣೆಗಳಿವೆ ಘ್ಢ್ಟಿಞ್ಜ.
ಭದ್ರಾವತಿ ತಹಸೀಲ್ದಾರರು ಗ್ರಾಪಂ ಉಪಾಧ್ಯಕ್ಷ ವಿರೂಪಾಕ್ಷಪ್ಪ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವವರ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು. ಪೊಲೀಸರು ಅವರ ಮೇಲೆ ಹೂಡಿರುವ ಗುಂಪು ಕಲಹದ ಪ್ರಕರಣ ತೆಗೆದುಹಾಗಿ ಭಾರತೀಯ ದಂಡಸಂಹಿತೆ 307ರ ಪ್ರಕಾರ ಹಲ್ಲೆ ಪ್ರಕರಣವನ್ನು ದಾಖಲಿಸಬೇಕೆಂದು ಸಂಗಮೇಶ್ವರ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹುಣಸೆಕಟ್ಟೆ ಗ್ರಾಪಂ ಉಪಾಧ್ಯಕ್ಷ ವಿರೂಪಾಕ್ಷಪ್ಪ, ಶಾಂತಕುಮಾರ್, ಸರೋಜ, ಸುರೇಶ, ಮಂಜುನಾಥ, ಗ್ರಾ.ಪಂ. ಸಿಬ್ಬಂದಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ತಹಸಾಲ್ದಾರ್ ಸಿದ್ದಮಲ್ಲಪ್ಪ ಅವರಿಗೆ ಪ್ರತಿಭಟನಕಾರರು ಮನವಿ ಅರ್ಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

