ಶಿವಮೊಗ್ಗ

ಬಿಜೆಪಿ ಯುವಮೋರ್ಚಾ ಬೈಕ್ ರ್ಯಾಲಿ

Published On :

ಕ.ಪ್ರ.ವಾರ್ತೆ ಟಿ ಸಾಗರ ಟಿ  ನ.13
ಬೆಂಗಳೂರಿನಲ್ಲಿ ನ.17ರಂದು ನಡೆಯಲಿರುವ ನರೇಂದ್ರ ಮೋದಿಯವರ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಯುವಮೋರ್ಚಾ ವತಿಯಿಂದ ಬುಧವಾರ ಬೈಕ್ ರ್ಯಾಲಿ ನಡೆಯಿತು.
ಪಟ್ಟಣದ ಮಹಾಗಣಪತಿ ದೇವಸ್ಥಾನದ ಬಳಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಅರುಣ್, ದೇಶದ ಜನರು ಮೂಲ ಸೌಲಭ್ಯದ ಕೊರತೆ ಅನುಭವಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ನೀಡುತ್ತಿರುವ ಹೇಳಿಕೆ ಹಾಸ್ಯಾಸ್ಪದ ಎಂದು ಟೀಕಿಸಿದರು.
ದಿಕ್ಕು ತಪ್ಪಿಸುವ ತಂತ್ರ: ಸ್ವಾತಂತ್ರ್ಯ ಬಂದಾಗಿನಿಂದ ರಾಹುಲ್ ಗಾಂಧಿಯವರ ಮುತ್ತಜ್ಜ ನೆಹರೂ, ಅಜ್ಜಿ ಇಂದಿರಾಗಾಂಧಿ,  ತಂದೆ ರಾಜೀವ್ ಗಾಂಧಿ ದೇಶದ ಆಡಳಿತ ನಡೆಸಿದ್ದಾರೆ. ಈಗಲೂ ಸೋನಿಯಾ ಗಾಂಧಿಯವರ ಆಣತಿಯಂತೆ ನಡೆಯುವ ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾರೆ. ಇಷ್ಟು ವರ್ಷದಲ್ಲಿ ಆಗದೇ ಇರುವ ಬದಲಾವಣೆ ಮುಂದಿನ ಅವಧಿಯಲ್ಲಿ ಮಾಡುತ್ತೇವೆ ಎಂದು ರಾಹುಲ್ ಹೇಳುತ್ತಿರುವುದು ಜನರನ್ನು ದಿಕ್ಕು ತಪ್ಪಿಸುವ ತಂತ್ರವಾಗಿದೆ ಎಂದರು.
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ರಾಜು ಬಿ. ಮಡಿವಾಳ ಮಾತನಾಡಿ, ಸ್ವಾಭಿಮಾನಿ ಭಾರತ ನಿರ್ಮಾಣಕ್ಕೆ ಮೋದಿ ಪ್ರಧಾನಿಯಾಗುವುದು ಅಗತ್ಯವಾಗಿದೆ. ದೇಶವು ಅತ್ಯಂತ ಸಂದಿಗ್ಧ ಸ್ಥಿತಿಯಲ್ಲಿದ್ದು, ಕಾಂಗ್ರೆಸ್ ತೊಲಗಿಸುವ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಭವಾನಿ ರಾವ್, ಕಾರ್ಯದರ್ಶಿ ಸುನೀಲ್ ಫರ್ನಾಂಡಿಸ್ ಬಿಜೆಪಿ ತಾಲ್ಲೂಕು ಅಧ್ಯಕ್ಷ ಚೇತನರಾಜ್, ಪ್ರಮುಖರಾದ ರವೀಶ್, ಸಂತೋಷ ಶೇಟ್, ವ.ಶಂ.ರಾಮಚಂದ್ರ ಭಟ್, ಸತೀಶಬಾಬು, ಎಲ್.ವಿ.ಅಕ್ಷರ, ಐ.ವಿ.ಹೆಗಡೆ, ಪುರುಷೋತ್ತಮ, ಕಸ್ತೂರಿ ನಾಗರಾಜ್, ಅರವಿಂದ್, ಶ್ರೀನಿವಾಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.