ಶಿವಮೊಗ್ಗ

'ವಿದ್ಯಾವಂತರಾಗಿ ಸಮಾಜಕ್ಕೆ ಕೊಡುಗೆ ನೀಡಿ'

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ನ.13 ಮಕ್ಕಳು ವಿದ್ಯಾವಂತರಾಗುವುದರೊಂದಿಗೆ ಸಮಾಜಕ್ಕೆ ಏನ್ನಾದರೂ ಕೊಡುಗೆ ನೀಡಬೇಕು ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಸಲಹೆ ನೀಡಿದರು.
ಸ.ಪ.ಪೂ. ಕಾಲೇಜು ಆವರಣದಲ್ಲಿ ಬುಧವಾರ ಆಯೋಜಿಸಿದ್ದ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳು ಪ್ರಸ್ತುತ ಆಧುನಿಕ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ವಿದ್ಯಾಭ್ಯಾಸದ ಕಡೆ ಗಮನ ಹರಿಸುತ್ತಿಲ್ಲ. ಹಾಗಾಗಿ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಹಲವು ಯೋಜನೆ: ರಾಜ್ಯದಲ್ಲಿ ಸಾಕ್ಷರತೆ ಹೆಚ್ಚಿಸಲು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಬಿಸಿಯೂಟ, ಕ್ಷೀರಭಾಗ್ಯ ಹಾಗೂ ಸೈಕಲ್ ವಿತರಣೆಗಲಂತಹ ಹಲವಾರು ಯೋಜನೆ ತಂದಿದೆ. ಇದನ್ನು ವಿದ್ಯಾರ್ಥಿಗಳು ಬಳಸಿಕೊಂಡು ಚೆನ್ನಾಗಿ ಓದಿ, ಹೆಚ್ಚು ಅಂಕಗಳಿಸಬೇಕು ಎಂದರು. ಈ ಹಿಂದೆ ಕೇವಲ ಬಿಪಿಎಲ್ ಕಾರ್ಡ್ದಾರರಿಗೆ ಮಾತ್ರ ಸೈಕಲ್ ವಿತರಿಸಲಾಗುತ್ತಿತ್ತು. ಇಂದು ಎಲ್ಲಾ ಮಕ್ಕಳಿಗೂ ವಿತರಿಸಲಾಗುತ್ತಿದೆ ಎಂದ ಅವರು, ಸೈಕಲ್ ವಿತರಿಸುವಾಗ ಶಾಲಾ ಸಿಬ್ಬಂದಿ ಬಹಳ ಎಚ್ಚರಿಕೆಯಿಂದ ಇರಬೇಕು. ಒಳ್ಳೆಯ ಸೈಕಲ್ಗಳನ್ನು ಮಾತ್ರ ವಿತರಿಸಬೇಕು. ವಿದ್ಯಾರ್ಥಿಗಳು ಸೈಕಲ್ ಓಡಿಸುವಾಗ ಅತ್ಯಂತ ಜಾಗೂರಕತೆಯಿಂದ, ಯಾವುದೇ ಅಪಘಾತಗಳಿಗೆ ಅಸ್ಪದ ನೀಡಬಾರದು ಎಂದು ಸಲಹೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್. ರಮೇಶ್, ಉಪಪ್ರಾಂಶುಪಾಲ ರಮೇಶ್ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.