ಶಿವಮೊಗ್ಗ

ಚಾನಲ್ ಮೇಲೆ ಸೋಲಾರ್ ಪ್ಯಾನಲ್

Published On :

ಶಿವಮೊಗ್ಗ: ಗುಜರಾತ್ ಮಾದರಿಯಲ್ಲಿ ತುಂಗಾ ಮೇಲ್ದಂಡೆ ಕಾಲುವೆ ಮೇಲ್ಭಾಗ ಸೋಲಾರ್ ಪ್ಯಾನಲ್ ಅಳವಡಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಗುಜರಾತ್‌ನಲ್ಲಿ ನರ್ಮದಾ ನದಿಯ ಕಾಲುವೆ ಮೇಲ್ಭಾಗದಲ್ಲಿ ಸೋಲಾರ್ ಪ್ಯಾನಲ್ ಅಳವಡಿಸಿ ವಿದ್ಯುತ್ ಉತ್ಪಾದಿಸುತ್ತಿದ್ದು, ಮಾದರಿ ಎನಿಸಿಕೊಂಡಿದೆ.
ಶಿವಮೊಗ್ಗ ತುಂಗಾ ಮೇಲ್ದಂಡೆ ಯೋಜನೆ ಪ್ರದೇಶಕ್ಕೆ ವೀಕ್ಷಣೆಗೆಂದು ಆಗಮಿಸಿದ್ದ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಈ ಚಿಂತನೆ ಹರಿಯಬಿಟ್ಟಿದ್ದಾರೆ.
ಸಚಿವರು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ವಿಷಯವೊಂದು ಪ್ರಸ್ತಾಪವಾಯಿತು. ತುಂಗಾ ಮೇಲ್ದಂಡೆ ಯೋಜನೆಯ ಭಾರೀ ಕಾಲುವೆ ಶಿವಮೊಗ್ಗ ನಗರದೊಳಗೆ ಹಾಯ್ದು ಹೋಗಿದ್ದು ಇಲ್ಲಿ ಯಾವುದೇ ತಡೆಗೋಡ ಇಲ್ಲದ್ದರಿಂದ ಅಪಾಯ ಹೆಚ್ಚಾಗಿದೆ.
ತಡೆಗೋಡೆ ಪ್ರಸ್ತಾಪ: ಕಾಲುವೆ ಭಾರೀ ಆಳ ಇರುವುದರಿಂದ ಆತಂಕ ಹೆಚ್ಚಿದೆ. ಹೀಗಾಗಿ ತಡೆಗೋಡೆ ನಿರ್ಮಿಸುವ ಅಗತ್ಯವಿದೆ ಎಂದು ಹಿರಿಯ ಪರ್ತಕರ್ತರೊಬ್ಬರು ಸಚಿವರ ಗಮನ ಸೆಳೆದರು.
ಈ ಸಂದರ್ಭದಲ್ಲೇ ರಕ್ಷಣೆಗಾಗಿ ಏನೆಲ್ಲಾ ಮಾಡಬಹುದೆಂಬ ಚರ್ಚೆ ನಡೆದಾಗ, ಗುಜರಾತ್‌ನಲ್ಲಿ ಕಾಲುವೆಗೆ ಸೋಲಾರ್ ಪ್ಯಾನಲ್ ಅಳವಡಿಸಿದಂತೆ ಇಲ್ಲೂ ಏಕೆ ಅಳವಡಿಸಬಾರದು ಎಂದು ವಿಷಯ ಪ್ರಸ್ತಾಪವಾಯಿತು.
 ತಕ್ಷಣವೇ ಪ್ರತಿಕ್ರಿಯೆ ನೀಡಿದ ಸಚಿವ, ಸೋಲಾರ್ ಪ್ಯಾನಲ್ ಅಳವಡಿಸುವ ಮೂಲಕ ಅಪಾಯವನ್ನು ಕಡಿಮೆ ಮಾಡಲು ಸಾಧ್ಯವಿದೆ. ಜೊತೆಗೆ ವಿದ್ಯುತ್ ಉತ್ಪಾದನೆ ಕೂಡ ಸಾಧ್ಯವಿದೆ. ಹೀಗಾಗಿ ಈ ಪ್ರಯತ್ನದ ಸಾಧಕ ಬಾಧಕದ ಬಗ್ಗೆ ಪ್ರಯತ್ನಿಸಿ. ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ  ಸಚಿವ ಎಂಬಿ ಪಾಟೀಲರು ಸ್ಥಳದಲ್ಲೇ  ಸೂಚಿಸಿದರು.
ದಂಡಾವತಿ ಬಗ್ಗೆ ಚರ್ಚಿಸಿ ತೀರ್ಮಾನ...
ದಂಡಾವತಿ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕೇ ಬೇಡವೇ ಎಂಬುದನ್ನು ಸರ್ಕಾರ ಪರಾಮರ್ಶಿಸಲಿದೆ. ಹಾಗೆಯೇ ಜನಪ್ರತಿನಿಧಿಗಳು, ಅಧಿಕಾರಿಗಳು, ತಜ್ಞರೊಂದಿಗೆ ಸಮಾಲೋಚಿಸಿಯೇ ತೀರ್ಮಾನ ಕೈಗೊಳ್ಳಲಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಬಗ್ಗೆ ಸ್ಥಳೀಯ ಮುಖಂಡರು ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯ ಪಡೆಯಲಾಗುತ್ತದೆ. ಅಲ್ಲದೆ ಈ ವಿಷಯವಾಗಿ ಕೃಷ್ಣ ನ್ಯಾಯಾಧಿಕರಣದ ಮುಂದೆ ಸರ್ಕಾರದಿಂದ ಮನವಿ ಇರುವ ಹಿನ್ನೆಲೆಯಲ್ಲಿ ಮುಂದಿನ ದಿನದಲ್ಲಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.