ಶಿವಮೊಗ್ಗ

ಹೌಸಿಂಗ್ ಕೋ- ಸೊಸೈಟಿಗೆ ಪ್ರಶಸ್ತಿ

Published On :

ಕ.ಪ್ರ.ವಾರ್ತೆ  ಶಿವಮೊಗ್ಗ   ನ.14
ಸ್ನೇಹ ವಾಹಿನಿ ವಿವಿದೊದ್ದೇಶ ಸಹಕಾರ ಸಂಘ, ಶಿವಮೊಗ್ಗ ತಾಲೂಕು ಸಹಕಾರ ಸಂಘ- ಬ್ಯಾಂಕುಗಳು, ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ಸ್ ಕೋ ಆಪರೇಟಿವ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ 60ನೇ ಅಖಿಲ ಭಾರತ ಸಹಕಾರ ಸಪ್ತಾಹ-2013ರ ಮಹಿಳಾ ಸಬಲೀಕರಣ ದಿನ ಕಾರ್ಯಕ್ರಮದಲ್ಲಿ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಅದೇ ರೀತಿ ಆರ್. ವೆಂಕಟೇಶರಿಗೆ ಉತ್ತಮ ಸಹಕಾರಿ ಹಾಗೂ ಜಿ.ಸಿ. ಜಯಮ್ಮರಿಗೆ ಉತ್ತಮ ಮಹಿಳಾ ಸಹಕಾರಿ, ಕೆ.ಎಸ್. ಶೇಖರಪ್ಪರಿಗೆ ಉತ್ತಮ ನೌಕರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗುರುವಾರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಪುರುಷ ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ದೊಡ್ಡದು ಎಂದರು.
ಸಹಕಾರಿ ಕ್ಷೇತ್ರಗಳ ವಿವಿಧ ಯೋಜನೆಗಳಿಂದ ರೈತರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದ ಅವರು, ಬ್ಯಾಂಕ್‌ಗಳಿಂದ ಪಡೆದ ಹಣವನ್ನು ನಿಗದಿತ ಉದ್ದೇಶಕ್ಕೆ ಬಳಸಿಕೊಂಡು ನಿಗದಿಯ ಸಮಯದಲ್ಲಿ ಮರುಪಾವತಿಸುವಂತೆಯೂ ಅವರು ಸಲಹೆ ನೀಡಿದರು.
ಅಧ್ಯಕ್ಷತೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಡಿ. ಭೂಕಾಂತ ವಹಿಸಿದ್ದರು.
ನಗರಸಭೆ ಅಧ್ಯಕ್ಷೆ ಖುರ್ಷಿದಾ ಬಾನು, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತರಾದ ಚಂದ್ರಕಲಾ, ಮನೋವೈದ್ಯೆ ಶುಭ್ರತಾ, ರಾಜ್ಯ ತೋಟಗಾರಿಕಾ ಸಹಬಕಾರ ಮಹಾ ಮಂಡಳಿ ನಿರ್ದೇಶಕ ಮೋಹನ್ ಉಂಬ್ಳೇಬೈಲು, ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಎಲ್. ಜಗದೀಶ್, ಜಿಲ್ಲಾ ಸಹಕಾರ ಕೇಂದ್ರ ವ್ಯವಸ್ಥಾಪಕ ನಿರ್ದೇಶಕ ನಾಗಭೂಷಣ, ಎನ್. ರವಿ, ಕೃಪಾಶಂಕರ್, ಶೇಷಾದ್ರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.