ಗ್ರಾಮೀಣ ಕ್ರೀಡೆ ಪ್ರೋತ್ಸಾಹಕ್ಕೆ ಹಳ್ಳಿಗೊಂದು ಮೈದಾನ
ಕ.ಪ್ರ.ವಾರ್ತೆ ಸಾಗರ ನ.14
ಗ್ರಾಮೀಣ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಹಳ್ಳಿಗೊಂದು ಆಟದ ಮೈದಾನ ನಿರ್ಮಾಣ ಮಾಡುತ್ತಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ತಾಲೂಕಿನ ಮಾಸೂರು ಗ್ರಾಪಂ ವ್ಯಾಪ್ತಿಯ ದಿಗಟೆಕೊಪ್ಪದಲ್ಲಿ ಗುರುವಾರ ರಾಜ್ಯ ಸರ್ಕಾರದ ಹಳ್ಳಿಗೊಂದು ಆಟದ ಮೈದಾನ ಯೋಜನೆಯಡಿ ಆಟದ ಮೈದಾನ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಪ್ರತಿಭೆಗೆ ಕೊರತೆ ಇಲ್ಲ; ನಮ್ಮಲ್ಲಿ ಕ್ರೀಡಾ ಪ್ರತಿಭೆಗಳಿಗೆ ಕೊರತೆ ಇಲ್ಲ. ಆದರೆ ಅವಕಾಶ ಹಾಗೂ ಸೌಲಭ್ಯ ಕೊರತೆಯಿಂದ ಪ್ರತಿಭೆ ಕಮರಿ ಹೋಗುತ್ತಿದೆ. ಇದನ್ನು ಮನಗಂಡ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಮಾನಸಿಕ ಹಾಗೂ ದೈಹಿಕವಾಗಿ ವ್ಯಕ್ತಿಯನ್ನು ಸದೃಢಗೊಳಿಸುವ ಶಕ್ತಿ ಕ್ರೀಡೆಗೆ ಮಾತ್ರ ಇದೆ. ಆದ್ದರಿಂದ ನೆಹರೂ ಅವರ ಜನ್ಮದಿನಾಚರಣೆಯ ದಿನದಂದೇ ರಾಜ್ಯದಾದ್ಯಂತ ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದರು.
ಆಟದ ಮೈದಾನ ಸುಸಜ್ಜಿತವಾಗಿರಬೇಕು. ಕಾಮಗಾರಿಯನ್ನು ಉದ್ಯೋಗಖಾತ್ರಿ ಯೋಜನೆಯಡಿ ಕೈಗೆತ್ತಿಕೊಂಡು ಗುಣಮಟ್ಟದ ಕಾಮಗಾರಿ ನಡೆಯಬೇಕು. ಅಗತ್ಯವಿರುವ ಕಡೆ ರಸ್ತೆ ಸೌಲಭ್ಯ ಕಲ್ಪಿಸಲು ಸಹ ಯೋಜನೆಯಲ್ಲಿ ಅವಕಾಶವಿದೆ ಎಂದರು.
ಇತ್ತೀಚಿನ ವರ್ಷಗಳಲ್ಲಿ ಮಕ್ಕಳಲ್ಲಿ ಕ್ರೀಡೆ ಬಗ್ಗೆ ನಿರಾಸಕ್ತಿ ಎದ್ದು ಕಾಣುತ್ತಿದ್ದು, ಸರ್ಕಾರದ ಈ ಯೋಜನೆಯನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು
ಮಾಸೂರು ಗ್ರಾಪಂ ಅಧ್ಯಕ್ಷೆ ಸುಧಾ ಅಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷ ಗಂಟೆ ಹರೀಶ್, ಉಪಾಧ್ಯಕ್ಷೆ ಗೌರಮ್ಮ, ಸದಸ್ಯರಾದ ಶ್ವೇತಾ ಕಾಗೋಡು, ಪಾರ್ವತಿ, ಜಿಪಂ ಸದಸ್ಯ ರತ್ನಾಕರ ಹೊನಗೋಡು, ಸುಮಂಗಲ ರಾಮಕೃಷ್ಣ ಮೊದಲಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

