ಶಿವಮೊಗ್ಗ

ವರ್ಗೀಸ್ ಪಯಣಕ್ಕೆ ಚಾಲನೆ

Published On :

ಶಿವಮೊಗ್ಗ: ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ಜಾಗೃತಿ ಮೂಡಿಸಲು ಬೈಕ್‌ನಲ್ಲಿ ಏಕಾಂಗಿಯಾಗಿ ಪಯಣ ಹೊರಟಿರುವ ರಿಪ್ಪನ್ ಪೇಟೆಯ ವಿಜೋ ವರ್ಗೀಸ್ ಅವರಿಗೆ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಗುರುವಾರ ಚಾಲನೆ ನೀಡಿದರು.
ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ವಿಜೋ ವರ್ಗೀಸ್ ಅವರ ಈ ಪಯಣ ಅತ್ಯಂತ ಸ್ತ್ಯುತ್ಯಾರ್ಹ. ಪ್ರವಾಸ ಸಂದರ್ಭದಲ್ಲಿ ಆಯಾ ಜಿಲ್ಲೆಗಳ ಆಡಳಿತದೊಂದಿಗೆ ಸಂಪರ್ಕ ಹೊಂದಿ. ನಿಮ್ಮ ಪಯಣ ಯಶಸ್ವಿಯಾಗಲಿ ಎಂದು ಈ ಸಂದರ್ಭದಲ್ಲಿ ಸಸಿಕಾಂತ್ ಸೆಂಥಿಲ್ ಅವರು ಶುಭ ಹಾರೈಸಿದರು.
ಶೌರ್ಯ ಪ್ರಶಸ್ತಿ ಪುರಸ್ಕೃತ ಬಾಲಕಿ ನಯನ ವೈ.ಸಿ. ಅವರಿಗೆ ಸನ್ಮಾನಿಸಲಾಯಿತು. ಸರ್ವಶಿಕ್ಷ ಅಭಿಯಾನದ ಜಿಲ್ಲಾ ಉಪ ಸಮನ್ವಯಾಧಿಕಾರಿ ಎ. ಗಣಪತಿ, ಇದ್ದರು. ರಿಪ್ಪನ್ ಪೇಟೆ ವಿಭಾಗದ ರೋಟರಿ ಅಧ್ಯಕ್ಷ, ವಿಜೋ ವರ್ಗೀಸ್ ಅವರ ತಂದೆ ವರ್ಗೀಸ್ ಪಿ.ಜೆ. ಇದ್ದರು.
ಗೆಳೆಯರು ಹಾಗೂ ಬಂಧುಗಳು ವಿಜೋ ಅವರಿಗೆ ಶುಭ ಹಾರೈಸಿ ಬೀಳ್ಗೊಟ್ಟರು.  21 ವರ್ಷದ ವಿಜೋ ವರ್ಗೀಸ್, ಮುಂದಿನ 25 ದಿನಗಳ ಕಾಲ ಕರ್ನಾಟಕ, ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಲ್ಲಿ ಪಯಣಿಸಿ ಶಿಕ್ಷಣದ ಪ್ರಾಮುಖ್ಯತೆ ಹಾಗೂ ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.