24ರಂದು ಕಲಾಕುಂಚ ಸಾಮಾನ್ಯ ಸಭೆ
ಶಿವಮೊಗ್ಗ: ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸರ್ವ ಸದಸ್ಯರ ಸಾಮಾನ್ಯ ಸಭೆ ನ.24ರಂದು ಬೆಳಗ್ಗೆ 10.30ಕ್ಕೆ ದಾವಣಗೆರೆ ರೋಟರಿ ಬಾಲಭವನದಲ್ಲಿ ನಡೆಯಲಿದೆ. ಸಂಸ್ಥೆ ಸದಸ್ಯರಾದ ಅನ್ನಪೂರ್ಣ ಪಾಟೀಲ್ರ ಸಾಧನೆಗೆ ಅಭಿನಂದಿಸಲಾಗುವುದು. ದಾವಣಗೆರೆ ಗೃಹಿಣಿ ಸ್ಪರ್ಧೆ 2014ರ ಸಮಿತಿ ರಚನೆ, ಚರ್ಚೆ, ಕನ್ನಡ ಕುವರ- ಕುವರಿ ಪ್ರಶಸ್ತಿ ಪ್ರದಾನ ಸಮಾರಂಭ, ಸದಸ್ಯರ ಕುಟುಂಬ ವರ್ಗಕ್ಕೆ ಆಟೋಟ ಸ್ಪರ್ಧೆ ಆಯೋಜಿಸಿದೆ. ಸರ್ವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನ ಕಾರ್ಯದರ್ಶಿ ಮಂಜುಳಾ ನಾಗರಾಜ ಕೋರಿದ್ದಾರೆ.
18ರಂದು ತಾಪಂ ಸಭೆ
ದಾವಣಗೆರೆ ತಾಪಂ ತ್ರೈಮಾಸಿಕ ಕೆಡಿಪಿ ಸಭೆ ನ.18ರಂದು ನಗರದ ತಾಪಂ ಸಭಾಂಗಣದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 11ಕ್ಕೆ ಮಾಯಕೊಂಡ ಶಾಸಕ ಕೆ. ಶಿವಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಅನೇಕ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ತಾಪಂ ಅಧ್ಯಕ್ಷ ದೊಗ್ಗಳ್ಳಿ ರೇವಣಸಿದ್ದಪ್ಪ, ಉಪಾಧ್ಯಕ್ಷರು, ಸದಸ್ಯರು ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಎಲ್.ಎಸ್. ಪ್ರಭುದೇವ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

