ಶಿವಮೊಗ್ಗ

700 ಮಕ್ಕಳಲ್ಲಿ ಒಂದು ಮಗುವಿಗೆ ಸೀಳು ತುಟಿ ಸಮಸ್ಯೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ನ.16
ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ಆಶ್ರಯದಲ್ಲಿ ಶನಿವಾರ ರಾಜೇಂದ್ರನಗರದಲ್ಲಿರುವ ರೋಟರಿ ಶಾಲೆಯಲ್ಲಿ ಮಕ್ಕಳಿಗೆ ಸಾಮಾನ್ಯವಾಗಿ ಕಂಡು ಬರುವ ಸೀಳುತುಟಿ ಮತ್ತು ಸೀಳು ಅಂಗಗಳ ಪೀಡಿತರನ್ನು ಗುರುತಿಸುವಿಕೆ ಮತ್ತು ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು.
ಶಿಬಿರ ಉದ್ಘಾಟಿಸಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ ಗುಡದಪ್ಪ, ರಾಜ್ಯದಲ್ಲಿ ಪ್ರತಿ 700 ಮಕ್ಕಳಲ್ಲಿ ಒಂದು ಮಗುವಿಗೆ ಸೀಳು ತುಟಿ ಸಮಸ್ಯೆ ಕಂಡುಬರುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಇತಂಹ ಮಗುವನ್ನು ಗುರುತಿಸಿ, ಬೆಂಗಳೂರಿನ ಜೈನ್ ಆಸ್ಪತ್ರೆಯಲ್ಲಿ ರೋಟರಿಯ ಸಹಾಯ ಪಡೆದು ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.
ಹಲವು ಕಾರಣ: ವಂಶಪಾರಂಪರ್ಯ ಹಾಗೂ ಇನ್ನಿತರ ಕಾರಣಗಳಿಂದ ಹಲವಾರು ಮಕ್ಕಳಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ಇದರ ನಿವಾರಣೆಗೆ ಸರ್ಕಾರ ಆಸಕ್ತಿ ವಹಿಸಿದೆ. ರೋಟರಿ ಸೇರಿದಂತೆ ಇತರೆ ಸಂಘ, ಸಂಸ್ಥೆಗಳು ಇಂತಹ ಮಕ್ಕಳ ಚಿಕಿತ್ಸೆಗೆ ಕೈಜೋಡಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಶಿಬಿರದಲ್ಲಿ ಭಾಗವಹಿಸಿದ ಸೀಳುತುಟಿ ಪೀಡಿತರನ್ನು ಗುರುತಿಸಿ ಅವರಿಗೆ ಚಿಕಿತ್ಸೆಗಾಗಿ ಮತ್ತು ಅಗತ್ಯವಿದ್ದಲ್ಲಿ ಶಸ್ತ್ರ ಚಿಕಿತ್ಸೆ ನೆರವೇರಿಸಲು ಚಿಕಿತ್ಸಾ ವೆಚ್ಚ ಹಾಗೂ ಬೆಂಗಳೂರಿಗೆ ಹೋಗಿ ಬರುವ ಪ್ರವಾಸ ವೆಚ್ಚ ಕೂಡ ಭರಿಸುವುದರ ಮೂಲಕ ಒಂದು ಉತ್ತಮ ಕಾರ್ಯವನ್ನು ರೋಟರಿ ಹಮ್ಮಿಕೊಂಡಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಅಧ್ಯಕ್ಷ ಕೆ.ಎಸ್. ಪುರುಷೋತ್ತಮ ವಹಿಸಿದ್ದರು.
ಕಾರ್ಯದರ್ಶಿ ಬಿ. ಪ್ರಸನ್ನಕುಮಾರ್, ರೋಟರಿ ವಿದ್ಯಾಸಂಸ್ಥೆ ಅಧ್ಯಕ್ಷ ಜಿ. ವಿಜಯಕುಮಾರ್, ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಸುಜಯ ಪುರುಷೋತ್ತಮ್, ಕಾರ್ಯದರ್ಶಿ ಶ್ವೇತ ಆಶಿತ್, ಬಿಂದು ವಿಜಯಕುಮಾರ್, ಮಹಾವೀರ್ ಜೈನ್ ಆಸ್ಪತ್ರೆಯ ಕೆ.ಎಸ್. ಮನೋಹರ್ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.