ಆಧುನಿಕ ತಂತ್ರಜ್ಞಾನದಿಂದ ಮೂಲ ಸಂಸ್ಕೃತಿಗೆ ದಕ್ಕೆ
ಕ.ಪ್ರ.ವಾರ್ತೆ, ಶಿವಮೊಗ್ಗ, ನ.16
ಆಧುನಿಕ ತಂತ್ರಜ್ಞಾನಕ್ಕೆ ಮಾರುಹೋಗಿ ಭಾರತದ ಮೂಲ ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ವಿಷಾದ ವ್ಯಕ್ತಪಡಿಸಿದರು.
ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಶನಿವಾರ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವೈಜ್ಞಾನಿಕತೆ ಬೆಳವಣಿಗೆ: ಅತೀ ವೇಗದಲ್ಲಿ ಜಗತ್ತು ಆಧುನೀಕತೆಯತ್ತ ಸಾಗುತ್ತಿದೆ. ಇದರೊಂದಿಗೆ ವೈಜ್ಞನಿಕತೆ ಬೆಳೆಯುತ್ತಿದೆ. ಇದರ ಮಧ್ಯೆ ದೇಶದ ಸಂಸ್ಕೃತಿಯನ್ನು ಮರೆತಿದ್ದೇವೆ ಎಂದ ಅವರು, ಹಿಂದೆ ಭಾವಗೀತೆ, ಜಾನಪದ ಗೀತೆಗಳಂತಹ ಸ್ಪರ್ಧೆಗಳು ಹೆಚ್ಚಾಗಿ ನಡೆಯುತ್ತಿದ್ದವು. ಆದರೆ, ಇಂದಿನ ಯುವಜನತೆ ಪಾಶ್ಚತ್ಯ ಸಂಸ್ಕೃತಿಯತ್ತ ಆಕರ್ಷಿತರಾಗಿ, ತಂತ್ರಜ್ಞಾನ ಸ್ಪರ್ಧೆಗಳಿಗಷ್ಟೇ ಸಿಮೀತವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಯುವಕರಲ್ಲಿ ನಮ್ಮ ದೇಶದ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕಿದೆ ಎಂದರು.
ಹಿರಿಯರು, ಶಿಕ್ಷಕರು ಇಂದಿನ ಪೀಳಿಗೆಗೆ ಉತ್ತಮ ಮಾರ್ಗದರ್ಶನ ನೀಡಿ, ದೇಶದ ಸಂಸ್ಕೃತಿ, ಸಾಂಸ್ಕೃತಿಕ ಕಟ್ಟುಪಾಡುಗಳನ್ನು ನಶಿಸಿ ಹೋಗದಂತೆ ಕಾಪಾಡುವ ಹೊಣೆ ಹೊರಬೇಕು. ಕಿರಿಯರಿಗೆ ಮಾರ್ಗದರ್ಶನ ಮಾಡಬೇಕು. ವಿದ್ಯಾರ್ಥಿಗಳಿಗೆ ಭಾರತದ ಸಂಸ್ಕೃತಿಯ ಪರಿಚಯ ಮಾಡಿಕೊಡಬೇಕು. ಇಂತಹ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವುದರ ಮೂಲಕ ಹಳೇ ಸಂಸ್ಕೃತಿಯ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಸಾಂಸ್ಕೃತಿಕ ಅರಿವು ಅಗತ್ಯ: ಪದವಿಪೂರ್ವ ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕಿ ಇಂದುಮತಿ, ಪೇಪರ್ ಹೂವಿಗೆ ಸುಗಂಧ ದ್ರವ್ಯ ಸಿಂಪಡಿಸಿದರೆ ಹೇಗೆ ಕೃತಕವಾಗುತ್ತದೋ ಅದೇ ರೀತಿ ಸಾಂಸ್ಕೃತಿಕ ಅರಿವಿಲ್ಲದ ಶಿಕ್ಷಣ ವ್ಯರ್ಥವಾಗುತ್ತದೆ. ಸೂಪ್ತ ಪ್ರತಿಭೆ ಹೊರಹೊಮ್ಮಲು ಸಾಂಸ್ಕೃತಿಕ ವೇದಿಕೆ ಸಹಕಾರಿಯಾಗಿವೆ ಎಂದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಜಗದೀಶ್, ಕುಲಪತಿ ವಾಸುದೇವ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

