ಶಿವಮೊಗ್ಗ

'ಭಾರತ ಗೆಲ್ಲಿಸಿ' ವಿರುದ್ಧ ಪ್ರತಿಭಟನೆ

Published On :

ಕ.ಪ್ರ. ವಾರ್ತೆ, ಶಿವಮೊಗ್ಗ, ನ.16
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರಮೋದಿಯವರು ನ.17ರಂದು ಬೆಂಗಳೂರಿಗೆ ಬರುತ್ತಿರುವುದನ್ನು ಖಂಡಿಸಿ ಕರ್ನಾಟಕ ಕೋಮು ಸೌಹಾರ್ದ ವೇದಿಕೆ ಜಿಲ್ಲಾ ಘಟಕದ ಸದಸ್ಯರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
ಭಾರತವನ್ನು ಉಳಿಸಲು, ಮೋದಿಯನ್ನು ಸೋಲಿಸಲು ಮತ್ತು ಭಾರತದ ಶಾಂತಿ, ಸಮಾನತೆ, ಸಹಬಾಳ್ವೆ, ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಳ್ಳಲು ಮೋದಿ ತೊಲಗಿಸಿ ಭಾರತ ಉಳಿಸಿ ಎಂಬ ಘೋಷಣೆಯೊಂದಿಗೆ ಸಾಂಕೇತಿಕವಾಗಿ ಈ ಧರಣಿ ನಡೆಸಲಾಗುತ್ತಿದೆ. ಮೋದಿ ಈ ದೇಶಕ್ಕೆ ಮಾರಕವೇ ಹೊರತು ಒಳಿತಲ್ಲ. ಇಂತಹ ಅಭ್ಯರ್ಥಿ ದೇಶದ ಉನ್ನತ ಸ್ಥಾನ ಏರಲು ಸಾಧ್ಯವಿಲ್ಲ ಎಂದು ಧರಣಿ ನಿರತರು ಆಪಾದಿಸಿದರು.
ಮೋದಿಯಿಂದ ಭಾರತ ಉಳಿಸಲು ಸಾಧ್ಯವಿಲ್ಲ. ಇವರೇನಾದರೂ ಪ್ರಧಾನಮಂತ್ರಿಯಾದರೆ ದೇಶದ ವ್ಯವಸ್ಥೆಯೇ ಬುಡಮೇಲಾಗುತ್ತದೆ. ಆರ್ಥಿಕ ಮುಗ್ಗಟ್ಟು, ಕೋಮುಭಾವನೆ ಜನರಲ್ಲಿ ಉಂಟಾಗುತ್ತದೆ. ಅಭಿವೃದ್ಧಿ ಹರಿಕಾರ ಎಂದು ಬಿಜೆಪಿ ಮತ್ತು ಸಂಘ ಪರಿವಾರದ ಗುಂಪು ಮಾಡುತ್ತಿರುವ ಅಬ್ಬರದ ಪ್ರಚಾರ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಕಾರ್ಪೋರೇಟ್ ಸಂಸ್ಥೆಗಳಿಂದ ಪಡೆದ ಹಣದಿಂದ ಪ್ರಚಾರ ಮಾಡುತ್ತಿದ್ದಾರೆ ಎಂದು ಧರಣಿ ನಿರತರು ಆರೋಪಿಸಿದರು.
ಒಂದು ವೇಳೆ ಮೋದಿ ಪ್ರಧಾನಿಯಾದರೆ ಭಾರತ ಭಾರತವಾಗಿ ಉಳಿಯಲು ಸಾಧ್ಯವಿಲ್ಲ. ಮೋದಿಯಂತ ವ್ಯಕ್ತಿ ಕರ್ನಾಟಕ ರಾಜ್ಯಕ್ಕೆ ಆಗಮಿಸುವ ಅವಶ್ಯಕತೆಯೂ ಇಲ್ಲ. ಇಂತಹ ವ್ಯಕ್ತಿಯನ್ನು ಮುಂದಿನ ಚುನಾವಣೆಯಲ್ಲಿ ಜನ ಬೆಂಬಲಿಸಬಾರದು ಎಂದು ಧರಣಿ ನಿರತರು ಆಗ್ರಹಿಸಿದರು.
ಧರಣಿಯಲ್ಲಿ ಸಂಘಟನೆ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶ್ರೀಕಂಠ ಕೂಡಿಗೆ, ಮುಖಂಡ ಕೆ.ಎಲ್. ಅಶೋಕ್, ವಕೀಲ ಶ್ರೀಪಾಲ್, ಎಂ. ಗುರುಮೂರ್ತಿ, ಉಮೇಶ್, ವಿವೇಕ ಸಂಸ್ಥೆಯ ಕುಮಾರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.