ಶಿವಮೊಗ್ಗ

ಮುದ್ರಕರ ತರಬೇತಿಗೆ ಶಾಸಕರ ನೆರವು ಘೋಷಣೆ

Published On :

ಶಿವಮೊಗ್ಗ: ಮಲೆನಾಡಿನ ಮುದ್ರಕರ ತಾಂತ್ರಿಕ ನೈಪುಣ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಯೋಜಿಸಿರುವ ತರಬೇತಿ ಕಾರ್ಯಕ್ರಮಕ್ಕೆ ಅಗತ್ಯವಾದ ಭವನವನ್ನು ಸಜ್ಜುಗೊಳಿಸಲು ಐದು ಲಕ್ಷ ರುಪಾಯಿ ಅನುದಾನ ನೀಡುವುದಾಗಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಘೋಷಿಸಿದ್ದಾರೆ.
ಮಲೆನಾಡು ಮುದ್ರಕರ ಸಂಘ ಹಮ್ಮಿಕೊಂಡ ಮುದ್ರಕರ ಹಬ್ಬದ ಅಂಗವಾಗಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುದ್ರಕರು ಇನ್ನಷ್ಟು ತರಬೇತಿ ಪಡೆದು ನೈಪುಣ್ಯತೆ ಬೆಳೆಸಿಕೊಳ್ಳಬೇಕು. ಈ ಮೂಲಕ ಜನರಿಗೆ ಉತ್ತಮ ಸೇವೆಯನ್ನು ಕಡಿಮೆ ದರದಲ್ಲಿ ನೀಡುವಂತಾಗಬೇಕು ಎಂದು ಕರೆಕೊಟ್ಟರು.
ಮುದ್ರಕರ ಸಂಘ ಎಂದು ಸಂಘ ಕಟ್ಟಿ ಕೇವಲ ಸ್ವ ಹಿತಾಸಕ್ತಿ ಮಾಡದೇ ಎಲ್ಲಾ ಮುದ್ರಕರ ಬೆಳವಣಿಗೆಗೆ ಆಲೋಚಿಸುತ್ತಿರುವುದು ಶ್ಲಾಘನೀಯ. ಮುದ್ರಕರ ಸಂಘದ ಸಮಾಜಮುಖಿ ಚಟುವಟಿಕೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಮುದ್ರಕರ ಸಂಘಕ್ಕೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕೆ.ವಿ. ನಾಗರಾಜ್ ಮತ್ತು ಸತ್ಯಭಾಮ ಅವರನ್ನು ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಎನ್ಇಎಸ್ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ, ಸಂಘಧ ಅಧ್ಯಕ್ಷ ಎಂ. ಮಾಧವಾಚಾರ್, ಹರೀಶ್ ಮತ್ತಿತರರು ಹಾಜರಿದ್ದರು.
ಬೆಳಗ್ಗೆ ಜಾದೂ ಪ್ರದರ್ಶನ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.