ಸುದ್ದಿ ಸಂಕ್ಷೇಪ
ವಸ್ತು ಪ್ರದರ್ಶನ, ಮಾರಾಟ ಮೇಳ
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ಮಾರುಕಟ್ಟೆ ನೆರವು ಯೋಜನೆಯಡಿ ನ. 30 ರಿಂದ ಡಿಸೆಂಬರ್ 2ರವರೆಗೆ ಸಾಗರ ತಾಲೂಕು ಆನಂದಪುರದ ಜಗದ್ಗುರು ಮುರುಘರಾಜೇಂದ್ರ ಮಠದ ಆವರಣದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜಾತ್ರೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಏರ್ಪಡಿಸಲಾಗಿದೆ.ಈ ಮೇಳದಲ್ಲಿ ಮಹಿಳಾ ಉದ್ದಿಮೆದಾರರು, ಮಹಿಳಾ ಸಮಾಜಗಳು ಮತ್ತು ಸ್ತ್ರೀಶಕ್ತಿ ಸಂಘಗಳು, ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ಮಳಿಗೆ ಒದಗಿಸಲಾಗುವುದು.ಮಳಿಗೆ ಪಡೆಯಲಿಚ್ಛಿಸುವವರು ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 2ನೇ ಮಹಡಿ, ಪೃಥ್ವಿ ಮ್ಯಾನ್ಶನ್, ವಿನೋಬನಗರ, ಶಿವಮೊಗ್ಗ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಸಾಗರ ಇವರನ್ನು ಸಂಪರ್ಕಿಸಬಹುದು. ವಿವರಗಳಿಗಾಗಿ- 08183 262404.
ಮುಂಗಾರು ಬೆಳೆಗೆ ನೀರು ಬಿಡುಗಡೆ
ಶಿವಮೊಗ್ಗ: ಕರ್ನಾಟಕ ನೀರಾವರಿ ನಿಗಮ ನಿಯಮಿತ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಯೋಜನೆಯ ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಂದ ನ. 22ರ ಮಧ್ಯರಾತ್ರಿಯಿಂದ ನೀರು ಹರಿಸಲಾಗುವುದು. ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರದ ಶಾಖಾ ನಾಲೆಗಳಲ್ಲಿ ನೀರು ಹರಿಯಬಿಡಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ರಾಜ್ಯಮಟ್ಟದ ಪೈಕಾ ಕ್ರೀಡಾಕೂಟ
ಶಿವಮೊಗ್ಗ: ಭಾರತೀಯ ಕ್ರೀಡಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ನ. 22ರಿಂದ 24ರವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಪಂಚಾಯಿತಿ ಯುವ ಕ್ರೀಡಾ ಔರ್ ಖೇಲ್ ಅಭಿಯಾನ್ (ಪೈಕಾ) ಗ್ರಾಮೀಣ ಕ್ರೀಡಾಕೂಟ ಏರ್ಪಡಿಸಲಾಗಿದೆ.ನ. 22ರಂದು ಬೆಳಗ್ಗೆ 9 ಗಂಟೆಗೆ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹಾಗೂ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರ ಉಪಸ್ಥಿತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಕ್ರೀಡಾಕೂಟ ಉದ್ಘಾಟಿಸುವರು.ವಿಧಾನಸಭಾ ಸದಸ್ಯ ಕೆ.ಬಿ. ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸುವರು. ಯಡಿಯೂರಪ್ಪ, ಜಿಪಂ ಅಧ್ಯಕ್ಷೆ ಗೀತಾ ಬಿ. ಮಲ್ಲಿಕಾರ್ಜುನ್, ಬಿ.ವೈ. ರಾಘವೇಂದ್ರ, ಆಯನೂರು ಮಂಜುನಾಥ್, ಮಧು ಬಂಗಾರಪ್ಪ, ಜಿಲ್ಲೆಯ ಎಲ್ಲಾ ಶಾಸಕರು ಈ ಸಂದರ್ಭದಲ್ಲಿ ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

