ಕ್ರೀಡಾಪಟುಗಳಿಗೆ ತುಡಿತ ಇರಬೇಕು: ಸಚಿವ ಕಿಮ್ಮನೆ
ಶಿವಮೊಗ್ಗ: ತರಬೇತುದಾರರು ಕ್ರಿಡಾಪಟುಗಳಿಗೆ ಮಾರ್ಗದರ್ಶನ ಮಾಡುವುದು ಮುಖ್ಯವಲ್ಲ, ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕಬೇಕೆಂಬ ತುಡಿತ ಇರಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ನಗರದ ನವುಲೆಯ ಜೆಎನ್ಎನ್ ಸಿಇ ಕಾಲೇಜು ಕ್ರೀಡಾಂಗಣದಲ್ಲಿ ಭಾನುವಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅವರು, ಕ್ರೀಡಾಪಟುಗಳು ಹೆಚ್ಚಾಗಿ ತರಬೇತುದಾರರ ಮಾರ್ಗದರ್ಶನದಲ್ಲಿಯೇ ಸಾಧನೆ ಮಾಡಬೇಕು. ಕ್ರೀಡಾಪಟುಗಳು ಸಮಾಜದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಲು, ತರಬೇತುದಾರರ ಶ್ರಮವೂ ಮುಖ್ಯ. ಕ್ರಿಡಾಳುಗಳ ಜಯಕ್ಕೆ ಪೂರಕವಾದ ವಾತಾವರಣ ಸೃಷ್ಟಿಸುವುದಕ್ಕೆ ಎಲ್ಲರೂ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ತರಬೇತುದಾರರ ಪ್ರೋತ್ಸಾಹವೇ ಕ್ರೀಡಾಪಟುಗಳ ಸಾಧನೆಗೆ ದಾರಿದೀಪವಾಗಬೇಕು ಎಂದ ಅವರು, ಪ್ರತಿಭೆಗೆ ಸರಿಯಾದ ಪ್ರೋತ್ಸಾಹವಿಲ್ಲದ ಕಾರಣ ಗ್ರಾಮೀಣ ಪ್ರದೇಶದಲ್ಲಿರುವ ಕ್ರೀಡಾಪಟುಗಳು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ. ಸರಿಯಾದ ಮಾರ್ಗದರ್ಶನಗಳ ಮೂಲಕ, ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮುವಂತೆ ಮಾಡುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಚಿವ ಕಿಮ್ಮನೆ ರತ್ನಾಕರ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಕೆ.ಬಿ. ಪ್ರಸನ್ನಕುಮಾರ್ ಕಾಲೇಜಿನಿಂದ ಹೊರತಂದಿರುವ ಸದೃಢ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.
ಇದಕ್ಕೂ ಮೊದಲು ಎನ್ಇಎಸ್ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಟಿಯು ಉಪಕುಲಪತಿ ಡಾ.ಎಚ್. ಮಹೇಶಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ, ವಿಟಿಯು ಕುಲಸಚಿವ ಡಾ. ಪ್ರಕಾಶ್, ಎನ್ಇಎಸ್ ಅಧ್ಯಕ್ಷ ನಂಜುಂಡಪ್ಪ, ಎ.ಜಿ. ಬುಜುರ್ಕೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

