ಶಿವಮೊಗ್ಗ

ಟೇಬಲ್ ಟೆನ್ನಿಸ್ನಲ್ಲಿ ಸುಚಿತ್ ಪ್ರಥಮ

Published On :

ಶಿವಮೊಗ್ಗ: ರೋವರ್ಸ್ ಕ್ಲಬ್ನಲ್ಲಿ ನಡೆದ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯ ಸಬ್ ಜೂನಿಯರ್ಸ್ ವಿಭಾಗದಲ್ಲಿ ಸುಚಿತ್ ಪಿ ಶೆಣೈ ಪ್ರಥಮ ಸ್ಥಾನ ಪಡೆದಿದ್ದಾರೆ.
ರೋಹಿತ್ ಜಮದಗ್ನಿ ದ್ವಿತೀಯ ಹಾಗೂ ಸಂಕೇತ್ ಹಾಗೂ ನೀರಾರಾಜು ತೃತೀಯ ಸ್ಥಾನ ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ಅರ್ಚನಾ ಕಾಮತ್ ವಿಜೋತರಾದರೆ, ಎಂ.ವಿ. ಸ್ಫೂರ್ತಿ, ವಿ. ಖುಷಿ, ಗಾಯತ್ರಿ ನಂತರದ ಸ್ಥಾನ ಹಂ ಚಿಕೊಂಡರು.
ಪಂದ್ಯಾವಳಿಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ 33 ವರ್ಷಗಳಿಂದ ನಿರಂತರವಾಗಿ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಾ ಕ್ರೀಡಾಪಟುಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ರೋವರ್ಸ್ ಕ್ಲಬ್ ಕಾರ್ಯ ಪ್ರಶಂಸನೀಯ ಎಂದರು.
 ಅಧ್ಯಕ್ಷತೆ ವಹಿಸಿದ್ದ ರೋವರ್ಸ್ ಕ್ಲಬ್ ಅಧ್ಯಕ್ಷ ಎಚ್.ಡಿ. ರಮೇಶ್ ಶಾಸ್ತ್ರಿ ವಿಜೇತ ಕ್ರೀಡಾಪಟುಗಳಿಗೆ ಪಾರಿತೋಷಕ ನೀಡಿ ಸನ್ಮಾನಿಸಿದರು. ಸಹ ಕಾರ್ಯದರ್ಶಿ ಕೆ.ರವಿ, ಸಂಚಾಲಕ ಜಿ. ವಿಜಯಕುಮಾರ, ಮಾಜಿ ನಗರಸಭಾಧ್ಯಕ್ಷ ಎಂ.ಕೆ. ಸುರೇಶ್ ಕುಮಾರ್, ದೇವದಾಸ್ ನಾಯಕ್ ಹಾಗೂ ಪದಾಧಿಕಾರಿಗಳು ಉಪಸ್ಥಿರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.