ಶಿವಮೊಗ್ಗ

ಅಸಂಘಟಿತ ವಲಯಕ್ಕೆ ಹಾಸುಗೆ ಕೂಲಿ ಕಾರ್ಮಿಕರು: ಪ್ರಸನ್ನ ಕುಮಾರ್

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ನ.19
ಹಾಸುಗೆ ಕೆಸಲದ ಕೂಲಿ ಕಾರ್ಮಿಕರನ್ನು ಗುರುತಿಸಿ ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ ಮಾಡಲಾಗುವುದು ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಭರವಸೆ ನೀಡಿದರು.
ಹಾಸುಗೆ ಕೆಲಸದ ಕೂಲಿ ಕಾರ್ಮಿಕರ ಸಂಘ ಸೋಮವಾರ ನಗರದ ಅರಬೀಯಾ ಮದರಸದಲ್ಲಿ ಏರ್ಪಡಿಸಿದ್ದ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೊಡ್ಡದೊಡ್ಡ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು, ಮನೆ ಕಟ್ಟಡ ಕಾರ್ಮಿಕರು ಅಸಂಘಟಿತ ವಲಯಕ್ಕೆ ಸೇರ್ಪಡೆಗೊಂಡು ಸರ್ಕಾರದಿಂದ ಆಶ್ರಯ ಮನೆ ಇತರೆ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಊರೂರು ತಿರುಗಿ ತುತ್ತಿನ ಚೀಲ ತುಂಬಿಸಿಕೊಳ್ಳುವ ಈ ಕಾರ್ಮಿಕರಿಗೆ ಯಾವುದೇ ಸೌಲಭ್ಯಗಳಲ್ಲಿದಿರುವುದು ವಿಪರ್ಯಸ ಎಂದು ಬೇಸರ ವ್ಯಕ್ತಪಡಿಸಿದರು.
ಎಲ್ಲಾ ರೀತಿಯ ಸೌಲಭ್ಯ: ಹಾಸುಗೆ ಕೆಲಸದ ಕೂಲಿ ಕಾರ್ಮಿಕರು ಅಸಂಘಟಿತ ಕಾರ್ಮಿಕರ ವಲಯಕ್ಕೆ ಸೇರುವುದರಿಂದ ಸರ್ಕಾರದ ಎಲ್ಲಾ ರೀತಿಯ ಸೌಲಭ್ಯ ಪಡೆಯಬಹುದು. ಅಲ್ಲದೇ ಅರ್ಹರಿಗೆ ಆಶ್ರಯ ಮನೆಗಳನ್ನು ನೀಡಲಾಗುವುದು. ಅದಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಫಲಾನುಭವಿಗಳು ಒದಗಿಸಿಕೊಳ್ಳಿ ಹಾಗೂ ಬಿಪಿಎಲ್ ಕಾರ್ಡ್ ಇಲ್ಲದವರು ತಮ್ಮ ಕಚೇರಿಗೆ ಬನ್ನಿ ಕಾರ್ಡ್ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಂಘಕ್ಕೆ ನಿವೇಶನ ನೀಡಲಾಗುವುದು ಎಂದ ಅವರು, ಸಂಘದ ಸದಸ್ಯರು ಸಂಘಟಿತರಾಗಬೇಕು. ತಮ್ಮಲ್ಲಿರುವ ತಾರತಮ್ಯವನ್ನು ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಆಶ್ರಯ ಮನೆ: ಸಂಘದ ಅಧ್ಯಕ್ಷ ರಾಜಕ್ನ್ಸಾಬ್ ಮಾತನಾಡಿ, ಈ ನಮ್ಮ ಸಂಘದ ಸದಸ್ಯರು ಗುರುತಿಸಿ ಮನೆ ಇಲ್ಲದವರಿಗೆ ಆಶ್ರಯಮನೆ ಅಥವಾ ಬೇರೆ ಯಾವುದಾದರೂ ಸೌಲಭ್ಯದಡಿ ಮನೆ ನೀಡಬೇಕು. ಕಾರ್ಮಿಕ ಇಲಾಖೆಯಲ್ಲಿ ಸಿಗಬೇಕಾದ ಸೌಲಭ್ಯದಡಿ ನಮ್ಮ ಕುಲಕಸುಬು ಇರುವುದಿಲ್ಲ. ಕೂಡಲೇ ಅಸಂಘಟಿತ ಕಾರ್ಮಿಕ ಸಂಘಟನೆಯಲ್ಲಿ ಸೇರಿಸಬೇಕು. ವೇಸ್ಟ್ ಕಾಟನ್ ಬಟ್ಟೆಯನ್ನು ಮತ್ತು ಹತ್ತಿ ಹಿಂಜುವ ಯಂತ್ರವನ್ನು ಸರ್ಕಾರದಿಂದ ಕಡಿಮೆ ದರದಲ್ಲಿ ನೀಡಬೇಕು. ಕಚೇರಿಗೆಗಾಗಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿ ಶಾಸಕರಿಗೆ ಮನವಿ ಮಾಡಲಾಯಿತು.
ನಗರಸಭೆ ಸದಸ್ಯ ಸಯ್ಯದ್ ಮಜಾರ್ ಜಾವಿದ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗ ಅಧ್ಯಕ್ಷ ಕೆ. ದೇವೇಂದ್ರಪ್ಪ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.