ಶಿವಮೊಗ್ಗ

'ಪರಸ್ಪರ ಟೀಕಿಯಲ್ಲಿ ರಾಜಕಾರಣಿಗಳು ಕಾಲಹರಣ'

Published On :

ಶಿವಮೊಗ್ಗ: ಪ್ರಸ್ತುತ ಜನಪ್ರತಿನಿಧಿಗಳು ಜನರ ಕಷ್ಟಗಳಿಗೆ ಸ್ಪಂದಿಸುವ ಬದಲು ಪರಸ್ಪರ ಟೀಕೆ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬೇಗಾನೆ ರಾಮಯ್ಯ ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 99ನೇ ಜನ್ಮ ದಿನಾಚರಣಾ ಕಾರ್ಯಕ್ರಮದಲ್ಲಿ ಅವರು, ಈ ದೇಶ ಕಂಡ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ತಮ್ಮ ಇಡೀ ಜೀವನವನ್ನು ದೇಶದ ಜನತೆಗಾಗಿ ಮೀಸಲಟ್ಟಿದ್ದರು. ಹಲವಾರು ಜನಪರ ಯೋಜನೆಗಳನ್ನು ದೇಶದ ಜನತೆಗೆ ಕೂಡುಗೆಯಾಗಿ ನೀಡಿದ್ದರು ಎಂದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ಸಿಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಂದಿರಾಗಾಂಧಿ ಅವರು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಇಂದಿರಾಗಾಂಧಿಯವರು ಜಾರಿಗೆ ತಂದ 20 ಅಂಶದ ಕಾರ್ಯಕ್ರಮವನ್ನು ಬೇರೆ ಯಾವುದೇ ಸರ್ಕಾರಗಳು ತರಲಿಲ್ಲ ಎಂದು ಹೇಳಿದರು.
ಬ್ಯಾಂಕಿಂಗ್ ಕ್ಷೇತ್ರವನ್ನು ರಾಷ್ಟ್ರೀಕರಣ ಮಾಡಿ ಬಂಡವಾಳ ಶಾಹಿಗಳ ವಿರುದ್ಧ ಧ್ವನಿಯೆತ್ತಿ ಸಂಕಷ್ಟದ ಪರಿಸ್ಥಿತಿಗಳಲ್ಲೂ ಪ್ರಪಂಚವೇ ಬೆರಗಾಗುವಂತಹ ನಾಯಕತ್ವ ಕೊಟ್ಟಂತಹ ಧೀರ ಮಹಿಳೆ ಇಂದಿರಾಗಾಂಧಿ. ಅಪಾರ ಸಂಪತ್ತು ಹೊಂದಿದ್ದರೂ ಸರಳ ಜೀವನ ನಡೆಸಿ ಇತರೆ ರಾಜಕಾರಣಿಗಳಿಗೆ ಮಾದರಿಯಾಗಿದ್ದರು ಎಂದರಲ್ಲದೇ, ಕಾರ್ಯಕರ್ತರು ಪಕ್ಷಕ್ಕಾಗಿ ಹೆಚ್ಚಿನ ಒತ್ತು ನೀಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನವನ್ನು ದೊರಕಿಸುವಲ್ಲಿ ಶ್ರಮಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್, ಶಾಸಕ ಪ್ರಸನ್ನಕುಮಾರ್, ಮುಖಂಡ ಇಸ್ಮಾಯಿಲ್ ಖಾನ್, ಚಂದ್ರಶೇಖರಪ್ಪ, ರುದ್ರೇಶ್, ಹಾಲಪ್ಪ, ಶಿವಾನಂದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.