ವಿಐಎಸ್‌ಎಲ್ ಕಾರ್ಖಾನೆ ಖಾಸಗೀಕರಣ ತಡೆಗೆ ನಿಯೋಗ
ಕ.ಪ್ರ.ವಾರ್ತೆ, ಶಿವಮೊಗ್ಗ, ನ. 19 ವಿಐಎಸ್‌ಎಲ್ ಖಾಸಗೀಕರಣ ತಡೆಯಲು ದೆಹಲಿಗೆ ಜಿಲ್ಲೆಯ ಜನ ಪ್ರತಿನಿಧಿಗಳ ನಿಯೋಗ ಹೊರಟಿದೆ.
ಭಾರತೀಯ ಉಕ್ಕು ಪ್ರಾಧಿಕಾರ ಸರ್.ಎಂ.ವಿಶ್ವೇಶ್ವರಯ್ಯನವರು ಸ್ಥಾಪಿಸಿದ ವಿ.ಐ.ಎಸ್.ಎಲ್‌ನ್ನು ಪಾಲುದಾರಿಕೆಯಲ್ಲಿ ಖಾಸಗೀಕರಣ ಮಾಡಲು ಜಾಗತಿಕ ಆಹ್ವಾನವನ್ನು ಕೈಗಾರಿಕೋದ್ಯಮಿಗಳಿಗೆ ಈ ಹಿಂದೆ ಪ್ರಕಟಣೆ ನೀಡಿತ್ತು.
ವರ್ಗಾವಣೆ; ಈ ಕೈಗಾರಿಕೆ ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಮತ್ತು ಮುಚ್ಚಬಾರದು ಎಂದು ಈ ಹಿಂದೆ ಕರ್ನಾಟಕ ಸರ್ಕಾರವು ಸಾಂಕೇತಿಕವಾಗಿ ಕೇವಲ ಒಂದು ರುಪಾಯಿ ಪಡೆದು ಭಾರತೀಯ ಉಕ್ಕು ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿಕೊಟ್ಟಿತ್ತು.
ಈಗ ಖಾಸಗೀಯವರನ್ನು ಆಹ್ವಾನಿಸಿ ಮೂಲ ಉದ್ದೇಶಕ್ಕೆ ಧಕ್ಕೆ ತಂದು ಕಾರ್ಖಾನೆಯ ಕಾರ್ಮಿಕರ ಭವಿಷ್ಯಕ್ಕೆ ಸಂಚಕಾರ ಬಂದಿದ್ದು, ಈ ಹಿಂದೆ ನಾವು ಪಕ್ಷಾತೀತವಾಗಿ ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದೆಂದು ಒತ್ತಾಯಿಸಿದ್ದೆವು ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದ್ದಾರೆ.
ಮುಖ್ಯಮಂತ್ರಿಯವರೂ ಈ ಸಂಬಂಧ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸಭಾಪತಿ ಕಾಗೋಡು ತಿಮ್ಮಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ ಹಾಗೂ ಜಿಲ್ಲೆಯ ಸಂಸದರು, ಶಾಸಕರು ಮತ್ತು ಕಾರ್ಮಿಕ ಮುಖಂಡರು ನ.21ರಂದು ದೆಹಲಿಗೆ ನಿಯೋಗ ತೆರಳಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಸಂಬಂಧಿಸಿದ ಉಕ್ಕು ಸಚಿವರನ್ನು ಮತ್ತು ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿ ಸೂಕ್ತ ಪರಿಹಾರ ಕಂಡುಕೊಳ್ಳಲಿದ್ದೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ಸಂಸತ್ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

