ಶಿವಮೊಗ್ಗ

ಅಜ್ಞಾತ ಸ್ಥಳದಲ್ಲಿ ಇಬ್ಬರು ನೇಣಿಗೆ ಶರಣು

Published On :

ಹೊಸನಗರ: ಒಬ್ಬ ಗಂಡು ಹಾಗೂ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ನಗರ ಠಾಣೆ ವ್ಯಾಪ್ತಿಯ ಹಾಲಗೆ ಕಾನುಗೋಡು ಸಮೀಪ ನಡೆದಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಲಿಂಗಮ್ಮನ ಹಳ್ಳಿಯ ಹನುಮ ಬೋವಿಯವರ ಮಗ ಹರೀಶ್ (35) ಹನುಮಂತಪ್ಪ ಎಂಬುವರ ಮಗಳು ರೇಖಾ (30) ಎಂಬುವವರು ನೇಣಿಗೆ ಶರಣಾದ ಶವಗಳು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಯಡೂರು ಸಮೀಪದ ಹಾಲಗೆ ಕಾನುಗೋಡಿನಿಂದ ಸುಮಾರು 1 ಕಿಮೀ ದೂರದ ಅಜ್ಞಾತ ಸ್ಥಳವೊಂದರಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ವಾರದ ಹಿಂದೆ ಈ ಘಟನೆ ಸಂಭವಿಸಿರಬಹದು ಎಂದು ಶಂಕಿಸಲಾಗಿದೆ.
ಮೃತರಿಬ್ಬರು ಪರಸ್ಪರ ಪ್ರೀತಿಸಿ ನಂತರ ಬೇರೆ ಬೇರೆ ಮದುವೆಯಾಗಿದ್ದರು ಎಂದು ಹೇಳಲಾಗುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮಾಹಿತಿಯಿಂದ ತಿಳಿದು ಬಂದಿದೆ.
ದನ ಹೊಡೆಯುವರೊಬ್ಬರು ಇದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳದಲ್ಲಿ ಧುರ್ನಾತ ಬೀರುತ್ತಿದೆ. ನಗರಠಾಣೆ ಪಿಎಸ್‌ಐ ತಿಪ್ಪಾರೆಡ್ಡಿ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.