ನಾಳೆ ತಿಮ್ಮಪ್ಪಗೆ ಗೌರವಾರ್ಪಣೆ
ಸಾಗರ: ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ವತಿಯಿಂದ ನ. 23ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರಿಗೆ ಗೌರವಾರ್ಪಣೆ ಹಾಗೂ ಅಡಕೆ ಬೆಳೆಗಾರರಿಗೆ ಕೊಳೆ ರೋಗ ನಷ್ಟ ಪರಿಹಾರಧನದ ಚೆಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತಾಲೂಕಿನಲ್ಲಿ ಪ್ರಥಮ ಬಾರಿಗೆ ಅಡಕೆ ಬೆಳೆ ಕೊಳೆ ರೋಗದಿಂದ ಅಪಾರ ನಷ್ಟ ಉಂಟಾಗಿದೆ. ಸರ್ಕಾರ ಪ್ರಥಮ ಬಾರಿಗೆ ಎಕರೆಗೆ 4800 ನಂತೆ ಬೆಳೆ ನಷ್ಟ ಪರಿಹಾರ ವಿತರಣೆ ಮಾಡುತ್ತಿದೆ. ಬೆಳೆಗಾರರು ಸಂಕಷ್ಟದಲ್ಲಿದ್ದಾಗ ಪರಿಹಾರ ಒದಗಿಸಲು ಶ್ರಮಿಸಿದ ವಿಧಾನಸಭಾಧ್ಯಕ್ಷರನ್ನು ಗೌರವಿಸುವ ಉದ್ದೇಶ ಸಂಘದ್ದಾಗಿದ್ದು, ಬೆಳೆಗಾರರು ಭಾಗವಹಿಸಬೇಕೆಂದು ಸಂಘದ ಅಧ್ಯಕ್ಷ ಬಿ.ಆರ್. ಜಯಂತ್ ಕೋರಿದ್ದಾರೆ.
30 ರಂದು ಅದಾಲತ್
ಸೊರಬ: ಪ್ರಸಕ್ತ 2013-14 ನೇ ಸಾಲಿನ ಶೈಕ್ಷಣಿಕ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಇಲ್ಲಿನ ಬಿಇಒ ಕಚೇರಿಯಲ್ಲಿ ಇದೇ ತಿಂಗಳ 30 ರಂದು ಶಿಕ್ಷಣ ಅದಾಲತ್ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಜ್ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

