ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಐವರ ಬಂಧನ
ಶಿವಮೊಗ್ಗ: ವೇಶ್ಯಾವಾಟಿಕೆ ನಡೆಸುತ್ತಿದ್ದ ಗೋಪಾಳದ ಮನೆಯೊಂದರ ಮೇಲೆ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ದಾಳಿ ನಡೆಸಿ, ವೇಶ್ಯಾವಾಟಿಕೆಗೆ ಸಹಕರಿಸುತ್ತಿದ್ದ ಮಹಿಳೆಯರನ್ನು ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಕೊಲ್ಕತಾ ಮೂಲದ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರೊಬ್ಬರ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಶಿವಕುಮಾರ್ ಮಾರ್ಗದರ್ಶನದಲ್ಲಿ ಕೋಟೆ ಸರ್ಕಲ್ ಇನ್ಸ್ಪೆಕ್ಟರ್ ಜೈರಾಜ್ ಹಾಗೂ ಮಹಿಳಾ ಠಾಣೆ ಇನ್ಸ್ಪೆಕ್ಟರ್ ಮಧು ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ. ಪೊಲೀಸರು ದಾಳಿ ನಡೆಸಿದಾಗ ಇಬ್ಬರು ಕೊಲ್ಕತಾ ಮೂಲದ ಯುವತಿಯರು ಹಾಗೂ ವಿದ್ಯಾನಗರದ ಹೇಮಂತ, ನಾರಾಯಣ ಎಂಬುವವರನ್ನು ಬಂಧಿಸಲಾಗಿದ್ದು, ವೇಶ್ಯಾವಾಟಿಕೆ ನಡೆಸುತ್ತಿದ್ದ ಪೂರ್ಣೇಶ್ ಕುಮಾರ ಹಾಗೂ ಇದಕ್ಕೆ ಸಹಕರಿಸುತ್ತಿದ್ದ ಶೋಭಾ ಎಂಬಾಕೆಯ ಮೇಲೆ ಮಹಿಳಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅನುಮಾನಸ್ಪದ ವ್ಯಕ್ತಿ ಸಾವು
ಶಿವಮೊಗ್ಗ: ವ್ಯಕ್ತಿಯೊಬ್ಬರು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದಲ್ಲಿರುವ ಹಾಯ್ ಹೊಳೆ ಬಳಿ ಗುರುವಾರ ಸಂಜೆ ನಡೆದಿದೆ. ಶಿವಾಜಿ(35)ಮೃತಪಟ್ಟವರು. ಇವರು ಮೂಲತಃ ಉಂಬ್ಳೇಬೈಲು ವಾಸಿಯಾಗಿದ್ದು, ಈತನ ಹೆಂಡತಿ ಗಲಾಟೆ ಮಾಡಿಕೊಂಡು ತನ್ನ ತವರು ಮನೆ ಹಾಯ್ ಹೊಳೆಗೆ ಹೋಗಿದ್ದರು. ಬೇಸತ್ತ ಶಿವಾಜಿ ಗುರುವಾರ ಹೆಂಡತಿಯ ಮನೆಗೆ ಹೋಗಿ ಗಲಾಟೆ ಮಾಡಿದ್ದಾನೆ.
ಈ ಸಂದರ್ಭದಲ್ಲಿ ಸ್ಥಳೀಯರು ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡು ಶಿವಾಜಿ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತುಂಗಾ ನಗರದಲ್ಲಿ ಪ್ರಕರಣ ದಾಖಲಾಗಿದೆ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

