ಕೋಳಿ ಅಂಗಡಿ ಸ್ಥಳಾಂತರಕ್ಕೆ ಆಗ್ರಹ
ಶಿವಮೊಗ್ಗ: ತಾಲೂಕಿನ ಆಯನೂರು ಗ್ರಾಮದ ಸಂತೆ ಮೈದಾನದಲ್ಲಿರುವ ಕೋಳಿ ಅಂಗಡಿಗಳನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ಆಯನೂರು ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದಾರೆ.
ಸಂತೆ ಮೈದಾನದ ಮೊದಲನೆ ತಿರುವಿನಲ್ಲಿ ಸುಮಾರು 5 ಕೋಳಿ ಅಂಗಡಿಗಳಿವೆ. ಅಂಗಡಿಗಳಲ್ಲಿ ಕೋಳಿ ಮಾಂಸ ಮಾರಾಟ ಮಾಡುವುದರಿಂದ ರಸ್ತೆಯಲ್ಲಿ ಸಂಚರಿಸುವುದು ಕಷ್ಟವಾಗಿದೆ. ಅಲ್ಲದೆ, ಕೋಳಿ ಮಾಂಸದ ಚೂರುಗಳನ್ನು ಅಲ್ಲಿಯೇ ಬಿಸಾಡುವುದರಿಂದ ದುರ್ವಾಸನೆ ಹೆಚ್ಚಾಗಿ ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ ಎಂದು ಗ್ರಾಮಸ್ಥರು ಮನವಿಯಲ್ಲಿ ಆರೋಪಿಸಿದ್ದಾರೆ. ಈ ರಸ್ತೆಯಲ್ಲಿ ಹಿಟ್ಟಿನ ಗಿರಣಿ, ಎಟಿಎಂ, ಅಂಗನವಾಡಿ ಕೇಂದ್ರ, ಮಹಿಳೆಯರ ಸ್ವ- ಸಹಾಯ ಸಂಘಗಳು ಹಾಗೂ ಸಾರ್ವಜನಿಕ ಗ್ರಂಥಾಲಯ ಮತ್ತು ಪ್ರಾಥಮಿಕ ಶಾಲೆಗಳಿವೆ. ಇದೇ ಮಾರ್ಗದಲ್ಲಿ ಕೋಳಿ ಮಾಂಸದ ಚೂರುಗಳನ್ನು ತಿನ್ನಲು ಬರುವ ನಾಯಿ, ಕಾಗೆಗಳ ಹಾವಳಿಯಿಂದ ಮಕ್ಕಳು ಓಡಾಡುವುದು ದುಸ್ತರವಾಗಿದೆ. ಇದರಿಂದ ಈ ಮಾರ್ಗ ರೋಗ ಹುಟ್ಟುಹಾಕುವ ಕೇಂದ್ರವಾಗುತ್ತಿದೆ ಎಂದು ಗ್ರಾಮಸ್ಥರು ಮನವಿಯಲ್ಲಿ ಆಪಾದಿಸಿದ್ದಾರೆ.
ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕೋಳಿ ಅಂಗಡಿಗಳನ್ನು ಬೇರೆಡೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಆರೋಗ್ಯದಿಂದಿರಲು ಸಹಕರಿಸಬೇಕು ಎಂದು ಗ್ರಾಮಸ್ಥರು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಗ್ರಾಮಸ್ಥ ಅಣ್ಣಪ್ಪ, ಜಯಂತಿ, ಪ್ರಮೀಳ, ಪಾರ್ವತಮ್ಮ, ದರ್ಶನ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

