ಶಿವಮೊಗ್ಗ

27ರಂದು ಮರದ ಡೊಳ್ಳು ಸ್ಪರ್ಧೆ

Published On :

ಸೊರಬ: ಕರುನಾಡು ಗೆಳೆಯರ ಬಳಗ ತಾಳಗುಪ್ಪ ಇವರು ಇದೇ ತಿಂಗಳ 27 ರಂದು ತಾಳಗುಪ್ಪ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಮರದ ಡೊಳ್ಳು ಸ್ಪರ್ಧೆ ಏರ್ಪಡಿಸಿದ್ದಾರೆ.
ಪ್ರಥಮ ಬಹುಮಾನ 7777, ದ್ವಿತೀಯ 5555, ತೃತೀಯ 3333 ನಗದು ಬಹುಮಾನವಿರಿಸಿದ್ದು, ಆಸಕ್ತ ಡೊಳ್ಳು ಕಲಾವಿದರು ಭಾಗವಹಿಸಿ, ಜನಪದ ಕಲೆಯ ಪೋಷಣೆಯಲ್ಲಿ ಕೈಜೋಡಿಸಬೇಕು ಎಂದು ಗೆಳೆಯರ ಬಳಗ ಕೋರಿದೆ. ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅನೇಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.
28ರಂದು ಕನ್ನಡ ರಾಜ್ಯೋತ್ಸವ
ಸೊರಬ: ಪಟ್ಟಣದಲ್ಲಿ ನ.28 ರಂದು ತಾಲೂಕು ನೌಕರರ ಸಂಘ ಮತ್ತು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ವೇಳೆ ಕನ್ನಡದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಎಸ್‌ಎಸ್‌ಎಲ್ಸಿ, ಪಿಯೂಸಿ, ಪದವಿಯ ಐಚ್ಛಿಕ ಕನ್ನಡದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ ಎಂದು ಸಂಘಗಗಳ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನ್ಯಭಾಷಿಗರಿಗೆ ಕನ್ನಡ ಕಲಿಸಿ: ಪ್ರಸನ್ನಕುಮಾರ್
ಶಿವಮೊಗ್ಗ: ಬೊಮ್ಮನಕಟ್ಟೆಯ ವಿವೇಕಾನಂದ ಗೆಳೆಯರ ಬಳಗ ಹಾಗೂ ಜ್ವಾಲಾಮುಖಿ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘ ಭಾನುವಾರ ಕನ್ನಡ ರಾಜ್ಯೋತ್ಸವ ಹಮ್ಮಿಕೊಂಡಿತ್ತು.
ಕಾರ್ಯಕ್ರಮದಲ್ಲಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್‌ಧ್ವಜಾರೋಹಣ ನೆರವೇರಿಸಿ ಮಾತನಾಡಿ, ರಾಜ್ಯದಲ್ಲಿ ನೆಲೆಸಿರುವ ಅನ್ಯಭಾಷಿಗರಿಗೆ ಕನ್ನಡವನ್ನು ಕಲಿಸುವ ಕಾರ್ಯವನ್ನು ಕನ್ನಡಪರ ಸಂಘಟನೆಗಳು ಮಾಡಬೇಕು. ಆಗ ಮಾತ್ರ ಕನ್ನಡವನ್ನು ಬೆಳೆಸಲು ಸಾಧ್ಯ ಎಂದರು.
ರಾಮಕೃಷ್ಣ ವಿವೇಕಾನಂದ ಆಶ್ರಮದ ವಿನಯಾನಂದ ಸ್ವಾಮೀಜಿ ಮಾತನಾಡಿ, ಇಂದಿನ ಯುವಕರು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸುಮಾರು 27 ವರ್ಷಗಳಿಂದ ಹಲವು ಬಗೆಯಲ್ಲಿ ನಿರಂತರವಾಗಿ ಕನ್ನಡಕ್ಕೆ ಸೇವೆ ಸಲ್ಲಿಸುತ್ತಿರುವ ಜ್ವಾಲಾಮುಖಿ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಮೂರ್ತಿಯವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಎಲ್. ಮಂಜುನಾಥ್, ಬಿಜೆಪಿ ಜಿಲ್ಲಾ ಯುವಮೋರ್ಚಾದ ರಾಜಶೇಖರ್, ಮೈಲಮ್ಮ ಮಿತ್ರ ಕೂಟದ ತಿಮ್ಮಯ್ಯ, ವಿವೇಕಾನಂದ ಗೆಳೆಯರ ಬಳಗ ಶ್ರೀಧರ್, ಶ್ರೀಹರ್ಷ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.