ಮಾರಕಾಸ್ತ್ರದಿಂದ ಹಲ್ಲೆ
ಸಾಗರ: ತಾಲೂಕಿನ ಆನಂದಪುರಂ ಬಿ.ಎಚ್. ರಸ್ತೆಯಲ್ಲಿರುವ ಗುತ್ಯಮ್ಮ ದೇವಸ್ಥಾನದ ಜಾಗವನ್ನು ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಕಾರ್ಯದರ್ಶಿ ಬಿ.ಡಿ. ರವಿಕುಮಾರ್, ಸದಸ್ಯರಾದ ಚಂದ್ರಕಾಂತ್, ಗಣೇಶ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ನಡೆಯಲಿರುವ ಗುತ್ಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ಕಾರ್ಯದ ಹಿನ್ನೆಲೆಯಲ್ಲಿ ಸಮಿತಿ ಸದಸ್ಯರು ಶನಿವಾರ ದೇವಸ್ಥಾನ ಆವರಣ ಸ್ವಚ್ಛಗೊಳಿಸುತ್ತಿದ್ದರು. ದೇವಸ್ಥಾನದ ಹಿಂಭಾಗದಲ್ಲಿ ವಾಸಿಸುತ್ತಿರುವ ಶಿವರಾಜ್ ಪಾಟೀಲ್ ಎಂಬವರ ಕುಟುಂಬದ ಕಿರಣ್, ಪ್ರಶಾಂತ್, ಪಾಟೀಲ್, ರೇಖಾ, ಪೂರ್ಣಿಮಾ ಎಂಬವರು ಸಮಿತಿ ಸದಸ್ಯರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಗಣೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಕಾರ್ಯದರ್ಶಿ ಬಿ.ಡಿ. ರವಿಕುಮಾರ್ ಹಾಗೂ ಚಂದ್ರಕಾಂತ್ ಎಂಬವರಿಗೂ ಸಣ್ಣ- ಪುಟ್ಟ ಹೊಡೆತ ಬಿದ್ದಿದೆ. ಗಾಯಗೊಂಡವರು ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಹಲ್ಲೆ ನಡೆಸಿದ ಶಿವರಾಜ್, ಕಿರಣ್, ಪ್ರಶಾಂತ್, ಪಾಟೀಲ್, ಸುನಂದಮ್ಮ, ರೇಖಾ, ಪೂರ್ಣಿಮ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಪ್ರತಿ ದೂರು ಗುತ್ಯಮ್ಮ ದೇವಸ್ಥಾನ ಸಮಿತಿ ಸದಸ್ಯರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸುನಂದಮ್ಮ ಎಂಬವರು ಗ್ರಾಮಾಂತರ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ.
--
ವಿದ್ಯಾರ್ಥಿ ಆತ್ಯಹತ್ಯೆ
ಶಿವಮೊಗ್ಗ: ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಡಿಎಆರ್ ಪೊಲೀಸ್ ವಸತಿ ಗೃಹದ ಮನೆಯೊಂದರಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕು ಬೀಡುಗೊಂಡನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್ ಕುಮಾರ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಶಿವಮೊಗ್ಗದ ಡಿವಿಎಸ್ ಪಿಯುಸಿ ಕಾಲೇಜಿನಲ್ಲಿ ವಿಜ್ಞಾನ ವಿಷಯದಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದರು. ಓದುವುದರಲ್ಲಿ ಆಸಕ್ತಿ ಕಡಿಮೆಯಿದ್ದರಿಂದ ಪ್ರವೀಣ್ಕುಮಾರ್ ಡಿಎಆರ್ ವಸತಿ ಗೃಹದಲ್ಲಿರುವ ಸಂಬಂಧಿಕರೊಬ್ಬರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಗಿದೆ.
ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ನ.27ರಂದು ಬೆಳಿಗ್ಗೆ 11ರಿಂದ 1.30ರವರೆಗೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮ ಪಂಚಾಯಿತಿಯಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಆಗುತ್ತಿರುವ ಅನಗತ್ಯ ವಿಳಂಬ, ಮತ್ತಿತರ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ನಿಗದಿತ ದಿನಾಂಕ, ಸಮಯ ಮತ್ತು ಸ್ಥಳಗಳಲ್ಲಿ ಖುದ್ದಾಗಿ ಹಾಜರಿದ್ದು ದೂರುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಂ.ಪಿ. ನಾಗರಾಜ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

