ವಿದ್ಯಾನಿಕೇತನ ಕಾಲೇಜಿಗೆ ಅಭಿನಂದನಾ ಪತ್ರ
ಶಿವಮೊಗ್ಗ: ನಗರದ ಶ್ರೀ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿಗೆ ಸರ್ಕಾರದ ಘೋಷಣೆಯಂತೆ 2013ನೇ ಸಾಲಿನ ಗುಣಾತ್ಮಕ ಶಿಕ್ಷಣದೆಡೆಗೆ ನಮ್ಮೆಲ್ಲರ ನಡಿಗೆ ಉತ್ತಮ ಸಾಧನೆಗೆ ಶಿಕ್ಷಣ ಇಲಾಖೆ ಅಭಿನಂದನಾ ಪತ್ರ ನೀಡಿ ಗೌರವಿಸಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷ ಎಚ್.ವಿ. ಮಹೇಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆಯ ಶ್ರೀ ವಿಜಯ ರಾಘವೇಂದ್ರ ಎಜುಕೇಷನ್ ಟ್ರಸ್ಟ್ ಆಶ್ರಯದಲ್ಲಿ 2009ರಲ್ಲಿ ನಗರದಲ್ಲಿ ಆರಂಭವಾದ ಶ್ರೀ ವಿದ್ಯಾನಿಕೇತನ ಪಿಯು ಕಾಲೇಜು ಉತ್ತಮ ಸಾಧನೆ ಮಾಡುತ್ತಿದೆ. 2010-11ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.60ರಷ್ಟು 2011-12ನೇ ಸಾಲಿನಲ್ಲಿ ಶೇ.97.5, 2012-13ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದು ಉತ್ತಮ ಹೆಸರು ಸಂಪಾದಿಸಿದೆ ಎಂದು ಅವರು ತಿಳಿಸಿದರು.
ಕಾಲೇಜಿನಲ್ಲಿ ಉತ್ತಮ ಬೋಧನೆ, ಪ್ರಯೋಗ ಶಾಲೆ, ಗ್ರೂಪ್ ಡಿ ಮೂಲಕ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಪ್ರತಿ ಕೊಠಡಿಗೆ ಸಿಸಿ ಕ್ಯಾಮೆರಾ ಅಳವಡಿಸಿ ವಿದ್ಯಾರ್ಥಿಗಳ ಚಲನವಲನ ಪ್ರಗತಿ ಬಗ್ಗೆ ನಿಗಾ ವಹಿಸಲಾಗಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿ ಸಾಧನೆ ಮಾಡಿದ್ದಾರೆ. ಕಾಲೇಜನ್ನು ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

