ಶಿವಮೊಗ್ಗ

ವೇತನ ಬಿಡುಗಡೆಗೆ ಆಗ್ರಹ

Published On :

ಶಿವಮೊಗ್ಗ: ಕಾರ್ಮಿಕರ ಬಾಕಿ ಉಳಿದಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ಗುತ್ತಿಗೆ ಆಧಾರದ ಮೇಲೆ ಸಚ್ಛತಾ ಕಾರ್ಮಿಕರು ಸೋಮವಾರ ಉಸ್ತುವಾರಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಮನವಿ ಸಲ್ಲಿಸಿದರು.
ಆಂಧ್ರಪ್ರದೇಶ ಮೂಲದವರು ಉದ್ಯಾನವನದ ನಿರ್ವಹಣೆಯ ಗುತ್ತಿಗೆ ಹಿಡಿದಿದ್ದಾರೆ. ಆದರೆ, ಕಳೆದ ಮೂರು ತಿಂಗಳಿನಿಂದ ನಮಗೆ ವೇತನ ನೀಡುತ್ತಿಲ್ಲ. ಈ ಕುರಿತಂತೆ ಗುತ್ತಿಗೆದಾರರನ್ನು ಕೇಳಿದರೆ ನಮ್ಮ ಗುತ್ತಿಗೆ ಅವಧಿ ಮುಕ್ತಾಯವಾಗಿದೆ. ಪಾರ್ಕ್‌ನ್ನು ನಗರಸಭೆಗೆ ಹಸ್ತಾಂತರ ಮಾಡಲಾಗಿದ್ದು, ಅವರೇ ವೇತನ ನೀಡುತ್ತಾರೆ ಎಂದು ತಿಳಿಸಿದ್ದಾರೆ. ಇದೀಗ ನಮಗೆ ವೇತನವೇ ನೀಡುತ್ತಿಲ್ಲ ಎಂದು ಕಾರ್ಮಿಕರು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ನಗರಸಭೆಯ ಅಧಿಕಾರಿಗಳನ್ನು ಕೇಳಿದರೆ ಗುತ್ತಿಗೆದಾರನೇ ವೇತನ ಪಾವತಿ ಮಾಡಬೇಕು. ನಮಗೂ ಇದಕ್ಕೂ ಸಂಬಂಧವಿಲ್ಲ ಎಂದು ತಿಳಿಸುತ್ತಿದ್ದಾರೆ. ಪ್ರಸ್ತುತ ಗುತ್ತಿಗೆದಾರನು ಯಾವುದೇ ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ. ಇದರಿಂದ ಕಳೆದ ಮೂರು ತಿಂಗಳುಗಳಿಂದ ವೇತನವಿಲ್ಲದೆ ಪರದಾಡುವಂತಾಗಿದೆ ಎಂದು ಸಿಬ್ಬಂದಿ ಮನವಿಯಲ್ಲಿ ಅಳಲು ತೋಡಿಕೊಂಡಿದ್ದಾರೆ.
ನಮಗೆ ನೀಡುತ್ತಿರುವ ವೇತನ ಕೂಡ ಅತ್ಯಲ್ಪವಾಗಿದೆ. ಅದೂ ಕೂಡ ನೀಡದಿದ್ದರೆ ನಮ್ಮ ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಕೂಡಲೇ ಗುತ್ತಿಗೆದಾರ ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ ವೇತನ ಬಿಡುಗಡೆಗೆ ತೀರ್ಮಾನಕೈಗೊಳ್ಳಬೇಕು. ನಮ್ಮ ಸಮಸ್ಯೆ ಆಲಿಸಿ ಬಾಕಿ ಉಳಿಸಿಕೊಂಡಿರುವ ವೇತನ ಬಿಡುಗಡೆಗೆ ಹಾಗೂ ವೇತನ ಹೆಚ್ಚಳಕ್ಕೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಾಲಕ್ಷ್ಮೀ, ಬೇಬಿ, ಚೌಡಮ್ಮ, ನವೀನ, ನಾಗರತ್ನ, ಧನಲಕ್ಷ್ಮೀ, ರೇಣುಕಾಬಾಯಿ, ಜಯಲಕ್ಷ್ಮೀ,  ಲಕ್ಷ್ಮೀಬಾಯಿ ಮತ್ತಿತರರು ಇದ್ದರು.

--
ಪದಾಧಿಕಾರಿಗಳ ಆಯ್ಕೆ
ಶಿವಮೊಗ್ಗ: ಜಿಲ್ಲಾ ಬ್ರಾಹ್ಮಣ ಮಹಾಸಭಾ ಹಾಗೂ ಗಾಯಿತ್ರಿ ಪ್ರತಿಷ್ಠಾನಕ್ಕೆ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ಡಾ. ವೆಂಕಟರಾವ್, ಉಪಾಧ್ಯಕ್ಷ ಕೆ.ಎಸ್. ನಾರಾಯಣರಾವ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಕೆ.ಸಿ.ನಟರಾಜ ಭಾಗವತ್, ಸಹ ಕಾರ್ಯದರ್ಶಿ ಎಸ್.ಎಂ. ತಿಮ್ಮಪ್ಪ, ಖಜಾಂಚಿ ವಿ.ಡಿ. ರವಿಕುಮಾರ್ ನೇಮಕವಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.