ಶಿವಮೊಗ್ಗ

ಸರ್ಕಾರಿ ಶಾಲೆ ಪ್ರತಿಭೆಗಳಿಗೆ ಪ್ರೋತ್ಸಾಹಿಸಿ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ನ. 25
ಶ್ರೀನಾಗ ಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ ಆಶ್ರಯದಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸ್ವಾಮಿ ವಿವೇಕಾನಂದ ಬಡಾವಣೆಯ ದೇವಸ್ಥಾನದ ಆವರಣದಲ್ಲಿ ನಡೆದ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಎಂಟು ವಿದ್ಯಾರ್ಥಿಗಳಿಗೆ ಒಟ್ಟು 28 ಸಾವಿರ ಮೊತ್ತದ ಚೆಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಮಾಜಿ ಅಧ್ಯಕ್ಷ ಎಂ. ಹಾಲಪ್ಪ, ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲೆಂದು ಹಾರೈಸಿದರು.
ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಭಾರತ ರತ್ನಕ್ಕೆ ಭಾಜನರಾದ ಪ್ರೊ. ಸಿಎನ್‌ಆರ್ ರಾವ್ ಅವರನ್ನು ಮನದಲ್ಲಿರಿಸಿಕೊಂಡು ನಾಗರಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ, ಸಮಾಜಮುಖಿ ಕಾರ್ಯದಲ್ಲಿ ತೊಡಗಬೇಕೆಂದು ಸಮಿತಿಯ ಸ್ಥಾಪಕ ಅಧ್ಯಕ್ಷ ನ.ರಾ. ವೆಂಕಟೇಶ್ ಕರೆ ನೀಡಿದರು.
ಸರ್ಕಾರಿ ಶಾಲೆಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಎಲ್ಲಾ ಸಂಘ- ಸಂಸ್ಥೆಗಳೂ ಕೈಗೊಳ್ಳಬೇಕೆಂದು ಸಲಹೆ ನೀಡಿದರು.
ಪೋಷಕರ ಪರವಾಗಿ ಮಾತನಾಡಿದ ಉಪನ್ಯಾಸಕ ನಿಸಾರ್ ಅಹ್ಮದ್, ಸರ್ಕಾರಿ ಶಾಲೆಗಳ ಪ್ರತಿಭೆಗಳನ್ನು ಗುರುತಿಸಿ ಪುರಸ್ಕರಿಸುವ ಸಮಿತಿಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಸೀನಪ್ಪ ವಹಿಸಿದ್ದರು. ಕಾರ್ಯದರ್ಶಿ ಎಸ್.ಆರ್. ದತ್ತಾತ್ರಿ ಸ್ವಾಗತಿಸಿ, ವಂದಿಸಿದರು.
ಪುರಸ್ಕಾರ: 2012-13ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 536 ಅಂಕ ಗಳಿಸಿದ ಶಿವಮೊಗ್ಗ ಸರ್ಕಾರಿ ಪ್ರೌಢ ಶಾಲೆಯ ಮೊಹಮ್ಮದ್‌ಗೆ 4 ಸಾವಿರ, ಗಾಡಿಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ಚೈತ್ರಾ (527)ಗೆ 4 ಸಾವಿರ ದುರ್ಗಿಗುಡಿ ಶಾಲೆಯ ಕಾರುಣ್ಯಗೆ (533) 3 ಸಾವಿರ, ಸರ್ಕಾರಿ ಉರ್ದು ಶಾಲೆಯ ಹಸೀನಾ ಬೇಗಂ (515) 3 ಸಾವಿರ ನಗದು ನೀಡಲಾಯಿತು.
ದ್ವಿತೀಯ ಪಿಯುಸಿಯಲ್ಲಿ 600 ಅಂಕಗಳಿಗೆ 550 ಅಂಕ ಗಳಿಸಿದ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜಿನ ವಿನುತಾ ಬಾಯಿಗೆ 4 ಸಾವಿರ, ಸರ್ಕಾರಿ ಪದವಿಪೂರ್ವ ಕಾಲೇಜಿನ ಭರತ್‌ಕುಮಾರ್(507)ಗೆ 4 ಸಾವಿರ, ಸತ್ಯಗೆ (504) 3 ಸಾವಿರ, ವಿಕ್ರಂಚವ್ಹಾಣ್(481) 3 ಸಾವಿರ ನಗದು ಬಹುಮಾನ ಪಡೆದುಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.