ಶಿವಮೊಗ್ಗ

'ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಸಲ್ಲ'

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ನ. 25
ಸಹಕಾರ ಸಂಘಗಳ ಪಾತ್ರ ಸಾಮಾಜಿಕ ಕ್ಷೇತ್ರದಲ್ಲಿ ಹಾಸುಹೊಕ್ಕಾಗಿದೆ ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ ಹೇಳಿದರು.
ಸೋಮವಾರ ನಗರದ ದುರ್ಗಿಗುಡಿ ಪಾರ್ಕ್ ಬಡಾವಣೆಯಲ್ಲಿರುವ ಸಹಕಾರ ಸಂಘದ 5ನೇ ಹಂತದ ವಾಣಿಜ್ಯ ಸಂಕೀರ್ಣ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು, ಷೇರುದಾರರ ಪರವಾಗಿ ಸಹಕಾರ ಸಂಘಗಳು ಕೆಲಸ ಮಾಡಬೇಕು. ಬರುವ ಲಾಭಾಂಶ ಸರಿಯಾದ ರೀತಿಯಲ್ಲಿ ವಿತರಣೆ ಮಾಡಬೇಕು. ಇದರಿಂದ ಸಹಕಾರಿ ಸಂಘಗಳಿಗೆ ಮತ್ತಷ್ಟು ಬಂಡವಾಳ ಹರಿದು ಬರುತ್ತದೆ ಎಂದರು.
ಸಹಕಾರ ಸಂಘಗಳು ಪ್ರಾಮಾಣಿಕವಾಗಿರಬೇಕು. ಅಲ್ಲಿ ಯಾವುದೇ ರೀತಿಯ ರಾಜಕೀಯ ಸಲ್ಲದು. ಒಳ್ಳೆಯ ಆಡಳಿತ ಮತ್ತು ಕಾಲಕಾಲಕ್ಕೆ ಆಗುವ ತಾಂತ್ರಿಕ ಬದಲಾವಣೆ ಒಳಗೂಡಿಸಿಕೊಳ್ಳುತ್ತಾ, ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಹಕಾರ ಸಂಘಗಳು ಬಡ ಮತ್ತು ಮಧ್ಯಮ ವರ್ಗದವರಿಗೆ ತುಂಬಾ ಅನುಕೂಲಕರವಾಗಿದೆ. ಅಲ್ಲಿ ನೀಡುವ ಸಾಲ ಮತ್ತು ಇತರೆ ಸೌಲಭ್ಯಗಳನ್ನು ಪಡೆದು ತಾವು ಬೆಳೆಯುವದರೊಂದಿಗೆ ಜೊತೆಗೆ ಸಹಕಾರ ಸಂಘಗಳನ್ನು ಬೆಳೆಸಬೇಕು ಎಂದರು.
ಸಂಘದ ಅಧ್ಯಕ್ಷ ದು. ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಸಂಘಗಳ ಉಪನಿಬಂಧಕ ಎಚ್.ಎಸ್. ಸಂತೋಷ್‌ಕುಮಾರ್, ಸಹಾಯಕ ನಿಬಂಧಕ ಎಚ್. ತಿಮ್ಮಪ್ಪ, ನಗರಸಭಾ ಸದಸ್ಯ ಐಡಿಯಲ್ ಗೋಪಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.