ಶಿವಮೊಗ್ಗ

28ರಂದು ಮಂಗಳ ಮಂದಿರ ಉದ್ಘಾಟನೆ

Published On :

ಶಿವಮೊಗ್ಗ: ರಾಮಾನುಜ ಸೌಹಾರ್ದ ಪತ್ತಿನ ಸಹಕಾರ ಆಲ್ಕೊಳ ವಿಕಾಸ ಪದವಿ ಪೂರ್ವ ಕಾಲೇಜು ಬಳಿ ನಿರ್ಮಿಸಿರುವ ಮಂಗಳ ಮಂದಿರದ ಉದ್ಘಾಟನಾ ಸಮಾರಂಭವನ್ನು ನ. 28ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಯು. ಆರ್. ರಾಮಸ್ವಾಮಿ ಅಯ್ಯಂಗಾರ್ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹರಿಹರಪುರ ಶ್ರೀಮಠದ ಶಂಕರಾಚಾರ್ಯ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಮಂದಿರ ಉದ್ಘಾಟಿಸುವರು. ಶಾಸಕ ಕೆ.ಬಿ. ಪ್ರಸನ್ನಕುಮಾರ್ ಸ್ವರ್ಣ ಸಂಚಿಕೆ ಬಿಡುಗಡೆ ಮಾಡುವರು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ್. ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಆರ್.ಕೆ. ಸಿದ್ದರಾಮಣ್ಣ ಅತಿಥಿಯಾಗಿ ಪಾಲ್ಗೊಳ್ಳುವರು ಎಂದರು.
ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಡಾ ವೆಂಕಟರಾವ್, ಹೈಕೋರ್ಟ್ ನಿವೃತ್ತ ನ್ಯಾ. ಬಿ.ಎನ್. ಕೃಷ್ಣನ್, ಸಹಕಾರಿ ಇಲಾಖೆ ನಿವೃತ್ತ ಅಪರ ನಿಬಂಧಕ ಎಂ.ಎನ್. ಅಶ್ವತ್ಥನಾರಾಯಣ, ದಾವಣಗೆರೆ ಪೂರ್ವ ವಲಯ ಅಧಿಕಾರಿ ಪರಶಿವಮೂರ್ತಿ, ನಿವೃತ್ತ ಐಪಿಎಸ್ ಅಧಿಕಾರಿ ಕಸ್ತೂರಿ ರಂಗನ್, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಮತ್ತಿತರರು ಉಪಸ್ಥಿತರಿರುವರು ಎಂದು ತಿಳಿಸಿದರು.
2005ರಲ್ಲಿ ಆರಂಭವಾದ ಸಂಘ 1,400 ಷೇರುದಾರರನ್ನು ಹೊಂದಿದ್ದು, ಪಾಲು ಬಂಡವಾಳ 27,58 ಲಕ್ಷ ಹಾಗೂ ಠೇವಣಿ 277 ಲಕ್ಷ ಇದ್ದು, ಸದಸ್ಯರಿಗೆ 200 ಲಕ್ಷ ಸಾಲ ನೀಡಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಂ.ಎಸ್. ಸುಂದರರಾಜ್, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಬಿ.ಎಸ್. ಅಶ್ವತ್, ನಿರ್ದೇಶಕ ಎಸ್.ಜಿ. ಗೋಪಾಲ, ಕೆ.ಎಲ್. ಪ್ರಹ್ಲಾದರಾವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.