ಬೈಕ್ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಶಿವಮೊಗ್ಗ: ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್ಗಳಿಗೆ ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ನಗರದ ಕೆ.ಆರ್.ಪುರಂ ರಸ್ತೆ ಹಾಗೂ ಕುಂಬಾರಗುಂಡಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ವೀರೇಶ್ ಹಾಗೂ ಭರತ್ ಎಂಬುವವರ ಬೈಕ್ಗಳು ಬೆಂಕಿಗೆ ಆಹುತಿಯಾಗಿವೆ. ಕೆ.ಆರ್. ಪುರಂನ ವೀರೇಶ್, ಕುಂಬಾರಗುಂಡಿಯ ಭರತ್ ತಮ್ಮ ಬೈಕ್ಗಳನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಇವರ ಬೈಕ್ಗಳಿಗೆ ಬೆಂಕಿ ಹಚ್ಚಿದ್ದು, ಬೈಕ್ ಗಳು ಸಂಪೂರ್ಣ ಭಸ್ಮವಾಗಿವೆ. ಕಿಡಿಗೇಡಿಗಳು ಯಾರೆಂಬು ತಿಳಿದು ಬಂದಿಲ್ಲ. ಪ್ರಕರಣ ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಗಿದೆ.
ಚಾನಲ್ಗೆ ಬಿದ್ದ ಮಗುವಿನ ಶವ ಪತ್ತೆ
ಶಿವಮೊಗ್ಗ: ಇಲ್ಲಿನ ಜೆಪಿ ನಗರದ ಮನೆ ಮುಂಭಾಗ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ ಬಾಲಕಿಯರಿಬ್ಬರಲ್ಲಿ ಒಬ್ಬಾಕೆಯ ಶವ ರವೀಂದ್ರ ನಗರ ತುಂಗಾ ನಾಲೆಯಲ್ಲಿ ಮಂಗಳವಾರ ಸಂಜೆ ಪತ್ತೆಯಾಗಿದೆ.
ಜೆಪಿ ನಗರದ ವಾಸಿ ಅಲ್ಲಾವುದೀನ್ ಎಂಬುವರ ಮಕ್ಕಳಾದ ಸುಬಾನ (10), ಸುಮಯ್ಯ (8) ಸೋಮವಾರ ನಾಪತ್ತೆಯಾಗಿದ್ದರು. ಪೋಷಕರು ಮಕ್ಕಳಿಗಾಗಿ ಎಲ್ಲೆಡೆ ಹುಡುಕಾಡಿ ರಾತ್ರಿ ಮನೆಗೆ ವಾಪಸಾಗಿದ್ದರು. ಮಂಗಳವಾರ ಸಂಜೆ ವೇಳೆಗೆ ಸುಮಯ್ಯ ಶವ ರವೀಂದ್ರ ನಗರ ವಿವೇಕಾನಂದ ಚಾನಲ್ನಲ್ಲಿ ಪತ್ತೆಯಾಯಿತು. ಸುಬಾನ ನಾಪತ್ತೆಯಾಗಿದ್ದು, ಪ್ರಕರಣ ದಾಖಲಾಗಿದೆ.
ಮಕ್ಕಳು ಚಾನಲ್ಗೆ ಜಾರಿ ಬಿದ್ದರೆ ಅಥವಾ ಆಟವಾಡಲು ಹೋದಾಗ ತೇಲಿಹೋದರೆ ಎಂಬುದು ಇನ್ನೂ ಖಚಿತವಾಗಿಲ್ಲ.
ಡಿಸಿ ಕಚೇರಿ ಎದುರಿನ ತಾಳೆ ಮರಕ್ಕೆ ಬೆಂಕಿ
ಶಿವಮೊಗ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ನೀರಾವರಿ ಇಲಾಖೆ ಕಚೇರಿ ಎದುರು ಇರುವ ತಾಳೆ ಮರಕ್ಕೆ ಬೆಂಕಿ ತಗುಲಿದ್ದು, ತಕ್ಷಣ ಅಗ್ನಿಶಾಮಕ ದಳ ಬೆಂಕಿ ನಂದಿಸಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಮರದ ಕೆಳಭಾಗದಲ್ಲಿರುವ ತರಗೆಲೆಗಳಿಗೆ ಬೆಂಕಿ ಹಚ್ಚಿದ್ದರಿಂದ ಮರಕ್ಕೆ ಏಕಾಏಕಿ ಬೆಂಕಿ ತಗುಲಿದೆ. ನಂತರ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ನಂತರ ಕೂಡಲೇ ಸ್ಥಳಕ್ಕೆ ಧಾಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

