ಅಹವಾಲು ಸ್ವೀಕಾರ
ಶಿವಮೊಗ್ಗ: ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ನವೆಂಬರ್ 30ರಂದು ಬೆಳಿಗ್ಗೆ 11ರಿಂದ 1.30ರವರೆಗೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮ ಪಂಚಾಯಿತಿಯಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳ ಕುರಿತು ಆಗುತ್ತಿರುವ ಅನಗತ್ಯ ವಿಳಂಬ, ಮತ್ತಿತರ ಸಮಸ್ಯೆಗಳಿದ್ದಲ್ಲಿ ನಿಗದಿತ ದಿನಾಂಕ, ಸಮಯ ಮತ್ತು ಸ್ಥಳಗಳಲ್ಲಿ ಖುದ್ದಾಗಿ ಹಾಜರಿದ್ದು, ದೂರುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಸೂಚನೆ
ಶಿವಮೊಗ್ಗ: ನಗರದ ಅಮೀರ್ ಅಹ್ಮದ್ವೃತ್ತದಿಂದ ಗೋಪಿ ವೃತ್ತದವರೆಗಿನ ನೆಹರೂ ರಸ್ತೆ ಎಡಭಾಗದಲ್ಲಿ ಅಳವಡಿಸಿದ್ದ ಭೂಗತ ಕೇಬಲ್ನಲ್ಲಿ ಹಾಗೂ ಫೀಡರ್ ಪಿಲ್ಲರ್ ಪಾರ್ಕ್ನಲ್ಲಿ ನ.29ರಿಂದ ವಿದ್ಯುತ್ ಸರಬರಾಜನ್ನು ಮಾಡಲಾಗುತ್ತಿದೆ. ನೆಹರೂ ರಸ್ತೆಯ ಕಟ್ಟಡ ಮಾಲೀಕರು ಹಾಗೂ ಬಾಡಿಗೆದಾರರು ಈ ರಸ್ತೆಯ ಎಡಭಾಗದಲ್ಲಿ ನೆಲವನ್ನು ಅಗೆಯುವುದು, ಬ್ಯಾನರ್ ಕಟ್ಟಲು ಗುಂಡಿ ತೋಡುವುದು ಮುಂತಾದ ಯಾವುದೇ ಕೆಲಸ ಮಾಡಬಾರದಾಗಿ ಮೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

