ಶಿವಮೊಗ್ಗ

ಆರ್‌ಟಿಒ ನೇಮಿಸಲು ಒತ್ತಾಯಿಸಿ ಪ್ರತಿಭಟನೆ

Published On :

ಶಿವಮೊಗ್ಗ: ಪ್ರಾದೇಶಿಕ ಸಾರಿಗೆ ಅಧಿಕಾರಿಯನ್ನು ನಿಯುಕ್ತಿಗೊಳಿಸಲು ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಶುಕ್ರವಾರ ಪ್ರತಿಭಟನೆ ನಡೆಸಿತು.
 ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಮೋರ್ಚಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜನರಿಗೆ ತೊಂದರೆ: ಶಿವಮೊಗ್ಗ ನಗರ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ಸುಮಾರು 6 ತಿಂಗಳಿಂದ ಆರ್‌ಟಿಓ ಹಾಗೂ ಸುಮಾರು ಒಂದೂವರೆ ವರ್ಷದಿಂದ ಎಆರ್‌ಟಿಓ ಇಲ್ಲದಿರುವುದರಿಂದ ಪ್ರತಿ ನಿತ್ಯ ಕಚೇರಿಗೆ ಬರುವ ಸಾರ್ವಜನಿಕರ ಕೆಲಸಕ್ಕೆ ಬಹಳಷ್ಟು ತೊಂದರೆಯಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.  ಸುಮಾರು ಎಂಟು ಜನ ಮೋಟಾರು ವಾಹನ ನಿರೀಕ್ಷಕರು (ಐಎಂವಿ) ಇರಬೇಕಾಗಿದ್ದು, ಕಳೆದ ಎರಡು ವರ್ಷದಿಂದ ಮೂವರು ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಪ್ರತಿ ನಿತ್ಯವೂ ಸಾಲುಸಾಲಾಗಿ ನಿಂತು ನರಕ ತಾಯತನೆ ಅನುಭವಿಸಬೇಕಾಗಿದೆ. ದಾಖಲಾತಿಗಳಿಗೆ ಕೂಡ ತಿಂಗಳುಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾಡಳಿತಕ್ಕೆ ಸಲ್ಲಿಸಿದ ಮನವಿಯಲ್ಲಿ ವಿವರಿಸಿದ್ದಾರೆ. ಈ ಸಂಬಂಧ ತ್ವರಿತವಾಗಿ ಕ್ರಮಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಭವಾನಿರಾವ್ ಮೋರೆ ಇದೇ ಸಂದರ್ಭದಲ್ಲಿ ಎಚ್ಚರಿಸಿದರು.  ಸೂಡಾ ಮಾಜಿ ಅಧ್ಯಕ್ಷ ಎಸ್.ದತ್ತಾತ್ರಿ, ಯ್ಚುವ ಮೋರ್ಚಾ ನಗರ ಅಧ್ಯಕ್ಷ ಹಿರಣ್ಣಯ್ಯ, ಕಾರ್ಯದರ್ಶಿ ರಾಘವೇಂದ್ರ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.