ಅಂಬೇಡ್ಕರ್ ಭಾವಚಿತ್ರ ಹಾಕದ ಅಧಿಕಾರಿ ಅಮಾನತಿಗೆ ಆಗ್ರಹ
ಶಿವಮೊಗ್ಗ: ಅಂಬೇಡ್ಕರ್ ಅವರ ಭಾವಚಿತ್ರವನ್ನು ತಮ್ಮ ಕಚೇರಿಯಲ್ಲಿ ಹಾಕದಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರನ್ನು ತಕ್ಷಣವೇ ಅಮಾನತು ಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಅಂಬೇಡ್ಕರ್ ಅವರು ಭಾರತ ಸಂವಿಧಾನವನ್ನು ರಚಿಸಿ ದೀನ ದಲಿತರ ಏಳಿಗೆಗಾಗಿ ಅಪಾರವಾಗಿ ಶ್ರಮಿಸಿದ್ದಾರೆ. ಮುಂದಿನ ಪೀಳಿಗೆಯು ಅವರ ಈ ಸೇವೆಯನ್ನು ಸ್ಮರಿಸುವ ಸಲುವಾಗಿ ಅವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಹಾಕುವಂತೆ 2008ರಲ್ಲಿ ಸುತ್ತೋಲೆಯನ್ನು ಹೊರಡಿಸಿ ಸರ್ಕಾರ ಆದೇಶ ನೀಡಿದೆ. ಆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈ ಆದೇಶವನ್ನು ಗಾಳಿಗೆ ತೂರಿದ್ದಾರೆ ಎಂಬುದು ದಸಂಸ ಆರೋಪಿಸಿದೆ.
ಸಂವಿಧಾನ ಶಿಲ್ಪಿ ಅಂಬೇಡ್ಕರ್, ಮಹಾತ್ಮಾಗಾಂಧಿ ಹಾಗೂ ರಾಧಾಕೃಷ್ಣನ್ ಅವರ ಭಾವಚಿತ್ರಗಳನ್ನು ಕಚೇರಿಯಲ್ಲಿ ಹಾಕದೆ ಈ ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಕಚೇರಿಯ ಮೂಲೆಯಲ್ಲಿ ಬಿಸುಟು ಅಪಮಾನ ಮಾಡಿರುತ್ತಾರೆ. ಈ ಕೃತ್ಯ ಖಂಡನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಭಾವಚಿತ್ರಕ್ಕೆ ಅಪಮಾನ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರನ್ನು ತಕ್ಷಣವೇ ಸೇವೆಯಿಂದ ಅಮಾನತ್ತು ಗೊಳಿಸಬೇಕೆಂದು ದಸಂಸ ಒತ್ತಾಯಿಸಿದೆ ಎಂದು ಸಂಘಟನೆಯ ಗುರಮೂರ್ತಿ, ಹಾಲೇಶಪ್ಪ, ರಮೇಶ್ ಚಿಕ್ಕಮರಡಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

