ಶಿವಮೊಗ್ಗ

ಇಂದು ಮ್ಯಾಕ್ಸ್‌ವರ್ತ್ ಗೀತಾಂಜಲಿ

Published On :

ಶಿವಮೊಗ್ಗ: ಶ್ರೀಶಂಕರ ವಾಹಿನಿ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನ.30ರಂದು ಸಂಜೆ 6 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಮ್ಯಾಕ್ಸ್‌ವರ್ತ್ ಗೀತಾಂಜಲಿ ಎಂಬ ಸಂಗೀತಮಯ ಕಾರ್ಯಕ್ರಮ ಏರ್ಪಡಿಸಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವಾಹಿನಿ ಕಾರ್ಯಕ್ರಮ ಮುಖ್ಯಸ್ಥ ಟಿ.ಎಂ. ಬಾಲಕೃಷ್ಣ, ಪ್ರಸಿದ್ಧ ಗಾಯಕರಿಂದ ರಾಷ್ಟ್ರಾಭಿಮಾನ ಸಾರುವ ಗಾಯನ, ಭಾವಗೀತೆ, ಭಕ್ತಿಗೀತೆ, ನಾಡಗೀತೆ, ದೇಶಭಕ್ತಿಗೀತೆ, ಜನಪದ ಗೀತೆಗಳು ಹಾಗೂ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಚಲನಚಿತ್ರ ಸಂಗೀತ ನಿರ್ದೇಶಕ ಗುರುಕಿರಣ್, ಚೈತ್ರಾ, ನಂದಿತಾ, ಚೇತನ್, ಗುರುರಾಜ್, ಹೂಸಕೋಟೆದೇವ, ಶಮಿತಾ ಮಲ್ನಾಡ್, ಅಚ್ಚುತ ಸಂಕೇತಿ ಸೇರಿದಂತೆ ಇತರೆ ಗಾಯಕರು ಹಾಗೂ ಆಕ್ಸಿಜನ್ ನೃತ್ಯ ತಂಡ, ಕೇರಳ, ಓಷ್ಯನ್ ಕಿಡ್ಸ್ ಮಂಗಳೂರು ನೃತ್ಯ ತಂಡಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಮುಖ್ಯಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶೃಂಗೇಶ್, ವ್ಯಂಗ್ಯಚಿತ್ರ ಕಲಾವಿದ ರಾಮಧ್ಯಾನಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಾಹಿನಿಯ ವರದಿಗಾರ ಹಾಗೂ ಮಾರ್ಕೆಟಿಂಗ್ ಮುಖ್ಯಸ್ಥ ಎಸ್.ಎಂ. ಶಿವಾನಂದ್ ಮತ್ತಿತರರು ಈ ಸಂದರ್ಭದಲ್ಲಿ ಉಪಸಸ್ಥಿತರಿದ್ದರು.

ಇಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ
ಶಿವಮೊಗ್ಗ:  ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಭೆಯು ಶನಿವಾರ ಪಕ್ಷದ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11ರಿಂದ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಅವರು ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದಸ್ಯ ಕೆ.ಬಿ. ಪ್ರಸನ್ನಕುಮಾರ್, ಕೆಪಿಸಿಸಿಯ ಜಿಲ್ಲಾ ಉಸ್ತುವಾರಿ, ಶಾಸಕ ರೋಷನ್ ಬೇಗ್, ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಮಹಾ ಪೌರ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ, ಕೆಪಿಸಿಸಿ ಕಾರ್ಯದರ್ಶಿ ಎಂ.ಅಬ್ದುಲ್ ಗಫೂರ್‌ರವರು, ಕರಿಯಣ್ಣ, ಮಾಜಿ ಸಚಿವ ಕುಮಾರ್ ಬಂಗಾರಪ್ಪನವರು, ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ ಉಪಸ್ಥಿತರಿರುವರು.
ಚರ್ಚಾ ವಿಷಯ
ಸದಸ್ಯತ್ವ ನೊಂದಾವಣೆ ಪ್ರಗತಿ ಪರಿಶೀಲನೆಯೊಂದಿಗೆ, ಅನ್ನಭಾಗ್ಯ ಯೋಜನೆಯಡಿಯಲ್ಲಿ ಕೆಲವು ಕಡೆ ಅಸಮರ್ಪಪಕ ವಿತರಣೆ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಜೊತೆಗೆ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದ ಬಗ್ಗೆ ಪ್ರಸ್ತಾಪವಾಗಲಿದೆ ಎಂದು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಎಸ್.ಟಿ. ಹಾಲಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.