ದೃಢ ಸಂಕಲ್ಪದಿಂದ ಮಾತ್ರ ಆಡಳಿತದಲ್ಲಿ ಕನ್ನಡ ಜಾರಿ
ಶಿಕಾರಿಪುರ: ಕನ್ನಡ ನಾಡು, ನುಡಿಯ ಬಗ್ಗೆ ಸರ್ಕಾರಿ ನೌಕರರು ದೃಢವಾದ ಸಂಕಲ್ಪ ಕೈಗೊಂಡಾಗ ಮಾತ್ರ ಆಡಳಿತದಲ್ಲಿ ಕನ್ನಡ ಜಾರಿಗೊಳ್ಳಲು ಸಾಧ್ಯವಾಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆಡಳಿತದಲ್ಲಿ ಕನ್ನಡ ಬಾಷೆಯ ಸಮರ್ಪಕ ಅನುಷ್ಟಾನವಾಗಿಲ್ಲ ಎಂದು ವಿಷಾದಿಸಿದರು. ಐಎಎಸ್ ಅಧಿಕಾರಿಗಳು ಕನ್ನಡ ಭಾಷೆ ಜಾರಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದ ಅವರು ಕನ್ನಡ ನಾಡಿನ ಸರ್ಕಾರಿ ನೌಕರರು ಈ ಬಗ್ಗೆ ಬಾಷೆಯನ್ನು ಉಳಿಸಿ ಬೆಳೆಸುವ ಪಣ ತೊಡಬೇಕಾಗಿದೆ ಎಂದು ಆಗ್ರಹಿಸಿದರು.
ಸರ್ಕಾರದ ಆದೇಶಗಳು, ಹಿರಿಯ ಅಧಿಕಾರಿಗಳ ಟಿಪ್ಪಣಿ, ಆಡಳಿತದ ಪರಿಭಾಷೆಗಳು ಸಮರ್ಪಕವಾಗಿ ಜನತೆಗೆ ಅರ್ಥವಾದಾಗ ಮಾತ್ರ ಬಾಷೆಯ ಸಮರ್ಪಕ ಅನುಷ್ಠಾನ ಸಾದ್ಯ ಎಂದ ಅವರು ಆಡಳಿತದಲ್ಲಿ ಹಿರಿಯ ಅಧಿಕಾರಿಗಳಿಂತ ಕಿರಿಯರು ದೃಡವಾಗಿ ನಿಶ್ಚಯಿಸಿದಲ್ಲಿ ಬಾಷೆಯ ಅಭಿವೃದ್ಧಿಯ ಜತೆಗೆ ಜನತೆಗೆ ಸಮರ್ಪಕ ಆಡಳಿತ ನೀಡಲು ಸಾಧ್ಯ ಎಂದರು. ರಾಜ್ಯ ಸರ್ಕಾರಿ ನೌಕರರ ಸಂಘದ ತಾ. ಘಟಕದ ಅಧ್ಯಕ್ಷ ಚಿನ್ನಪ್ಪ ಮಾತನಾಡಿ, ಸರ್ಕಾರಿ ನೌಕರರ ವರ್ಗಾವಣೆ, ಬಡ್ತಿ ಬಗ್ಗೆ ಸರ್ಕಾರ ಪಾರದರ್ಶಕ ನೀತಿ ಅಳವಡಿಸಿಕೊಳ್ಳಬೇಕು.ಅಧಿಕಾರದಲ್ಲಿರುವ ನೌಕರರು ನಿವೃತ್ತರಿಗೆ ದೊರೆಯಬೇಕಾಗಿರುವ ಪಿಂಚಣಿ, ಬಾಕಿ ಮತ್ತಿತರ ವಿಷಯದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲದಂತೆ ಅನುಕೂಲ ಕಲ್ಪಿಸಬೇಕು ಎಂದು ಕಿವಿಮಾತು ಹೇಳಿದರು.
ರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ನೌಕರರಿಗಾಗಿ ಹಮ್ಮಿಕೊಳ್ಳಲಾಗಿದ್ದ ಕ್ರೀಡಾಕೂಟದಲ್ಲಿನ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷೆ ಲೀಲಾವತಿ,ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ಜಿಲ್ಲಾ ಜಾಗೃತ ಸಮಿತಿ ಸದಸ್ಯ ಗುರುಮೂರ್ತಿ ಮತ್ತಿತರರನ್ನು ಅಭಿನಂದಿಸಲಾಯಿತು. ವೇದಿಕೆಯಲ್ಲಿ ತಹಶೀಲ್ದಾರ್ ಧರ್ಮೋಜಿರಾವ್, ಇಒ ಚಂದ್ರಶೇಖರ್, ಪುರಸಭಾ ಮುಖ್ಯಾಧಿಕಾರಿ ಮನೋಹರ್,ಸಹಾಯಕ ಕೃಷಿ ನಿರ್ದೇಶಕ ಡಾ.ಪ್ರಭಾಕರ್, ಉಪತಹಶೀಲ್ದಾರ್ ನಾಗರಾಜ್, ಡಾ. ತಿಪ್ಪೇಶ್, ರೇಣುಕಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

