'ನೈತಿಕತೆ ತುಂಬುವ ಮೂಲಕ ಬಾಲಾಪರಾಧ ತಡೆ ಸಾಧ್ಯ'
ಶಿವಮೊಗ್ಗ: ಆಧುನಿಕತೆ ಮುಂದುವರೆದಂತೆ ನೈತಿಕ ಮೌಲ್ಯ ಕಡಿಮೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ನೈತಿಕತೆ ತುಂಬುವ ಮೂಲಕ ಅಪರಾಧ ಚಟುವಟಿಕೆ ತಡೆಯಬಹುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧಿಶ ರವಿ ಎಂ. ನಾಯಕ್ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಸಮಿತಿ, ಬಾಲಭವನ ಸೊಸೈಟಿ ಆಶ್ರಯದಲ್ಲಿ ಶನಿವಾರ ಆಲ್ಕೋಳದ ಸ್ತ್ರೀಶಕ್ತಿ ಭವನದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
16ಕ್ಕೆ ಇಳಿಯಲಿ: ಆಧುನಿಕ ತಂತ್ರಜ್ಞಾನ ಬಳಸುವ ಮಕ್ಕಳ ಬಗ್ಗೆ ಪೋಷಕರು ನಿಗಾ ವಹಿಸಬೇಕು. ಮಕ್ಕಳನ್ನು ಬೆಳೆಸುವುದರಲ್ಲಿ ಪೋಷಕರ ಹೊಣಗಾರಿಗೆ ಅಪಾರ ಎಂದ ಅವರು, ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಬಾಲಪರಾಧಿಗಳ ವಯೋವುತಿಯನ್ನು 18ಕ್ಕೆ ನಿಗದಿಪಡಿಸಲಾಗಿದೆ. ಆದರೆ, ತಮ್ಮ ವೈಯಕ್ತಿಕ ಅಭಿಪ್ರಾಯದಂತೆ ಬಾಲಾಪರಾಧಿಗಳ ವಯೋವುತಿಯನ್ನು 16ಕ್ಕೆ ಇಳಿಸುವುದು ಸೂಕ್ತ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾಮಟ್ಟದ ಅಸಾಧರಣಾ ಪ್ರತಿಭೆ ಹಾಗೂ ಕಲಾಶ್ರೀ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಶಿವನಂದಪ್ಪ, ತಾರಾಪ್ರಸಾದ್, ಮಂಜುಳಾ ಆರಾಧ್ಯ, ಪಿ. ಶಿವಣ್ಣ, ಬಿ.ಜಿ. ಸುರೇಶ್, ಸುಮತಿ, ಡಿಡಿಪಿಐ ಬಿ.ಸಿ. ಬಸರಾಜಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಚ್. ಕೃಷ್ಣ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

