ಶಿವಾನುಭವಗೋಷ್ಠಿ
ಶಿವಮೊಗ್ಗ: ಆನಂದಪುರಂ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದಲ್ಲಿ ಸೆಪ್ಟೆಂಬರ್ 5ರಂದು 446ನೇ ಮಾಸಿಕ ಶಿವಾನುಭವಗೋಷ್ಠಿ ಹಮ್ಮಿಕೊಂಡಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಮಾಜ ಸೇವಕ ವೀರಪ್ಪ ಮುಖ್ಯ ಅತಿಥಿಯಾಗಿ ಉಪಸ್ಥಿತರಿರಲಿದ್ದು, ಚಿಂತಕ ಶಂಕರಶಾಸ್ತ್ರಿಯವರು ಉಪನ್ಯಾಸ ನೀಡಲಿದ್ದಾರೆ. ಬಿ.ಇಡಿ, ಡಿ.ಇಡಿ ಪ್ರಶಿಕ್ಷಣಾರ್ಥಿಗಳಿಂದ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು ಎಂದು ಮಠ ತಿಳಿಸಿದೆ.
ಇಂದು ಶಾಸಕರ ಕಚೇರಿ ಉದ್ಘಾಟನೆ
ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಶಾಸಕರ ಕಚೇರಿ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 2ರಂದು ಬೆಳಗ್ಗೆ 10 ಗಂಟೆಗೆ ಎಸ್.ಎನ್. ಮಾರುಕಟ್ಟೆ ಸಿಎಂಸಿ ಬ್ಲಾಕ್ನಲ್ಲಿ ನೆರವೇರುವುದು. ಸ್ವಾತಂತ್ರ್ಯ ಹೋರಾಟಗಾರ ಬಿ.ಎಂ. ನಂಜುಂಡಪ್ಪ ಶಾಸಕರ ಕಚೇರಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಹಿರಿಯ ವೈದ್ಯ ಡಾ. ಎನ್.ಎಲ್. ನಾಯಕ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್ ಉಪಸ್ಥಿತರಿರುವರು. ಶಾಸಕ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸರ್ವ ಸದಸ್ಯರ ಸಭೆ
ಶಿವಮೊಗ್ಗ: ಕೊಡಚಾದ್ರಿ ಗೃಹ ನಿರ್ಮಾಣ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 23ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಬಾಲರಾಜ ಅರಸ್ ರಸ್ತೆಯಲ್ಲಿರುವ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜಶೇಖರ್ ಎಸ್.ಪಾಟೀಲ್ ವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

