ಪುಸ್ತಕ ಮಳಿಗೆಯಲ್ಲಿ ಅಗ್ನಿ ಆಕಸ್ಮಿಕ: ರು. 2 ಲಕ್ಷ ನಷ್ಟ
ಕ.ಪ್ರ.ವಾರ್ತೆ, ಶಿವಮೊಗ್ಗ, ಸೆ.1
ನಗರದ ಗಾಂಧಿಬಜಾರ್ ವ್ಯಾಪ್ತಿಯ ತಿರುಪಳ್ಳಯ್ಯನ ಬೀದಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 2 ಲಕ್ಷ ರುಪಾಯಿಗೂ ಅಧಿಕ ಮೌಲ್ಯ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ಹಾನಿಯಾಗಿದೆ.
ಮಧ್ಯಾಹ್ನ 3 ಗಂಟೆ ಸುಮಾರಿಗೆ ಇಲ್ಲಿನ ಪ್ರಗತಿ ಎಂಟರ್ ಪ್ರೈಸಸ್ನೊಳಗಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದಾರೆ.
5 ಗಂಟೆ ಕಾರ್ಯಾಚರಣೆ: 3.15ರ ಸುಮಾರಿಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳಗಳು ಅಗ್ನಿ ನಂದಿಸಲು ಸಾಕಷ್ಟು ಶ್ರಮಪಟ್ಟವು. ದಟ್ಟವಾದ ಹೊಗೆಯ ಕಾರಣ ಸುಲಭವಾಗಿ ಅಗ್ನಿ ನಂದಿಸಲು ಸಾಧ್ಯವಾಗಲಿಲ್ಲ. ಅಗ್ನಿ ನಿಯಂತ್ರಣಕ್ಕೆ ಸುಮಾರು ಐದು ತಾಸು ಕಾರ್ಯಾಚರಣೆ ನಡೆಸಲಾಯಿತು. ಎರಡು ತಂಡಗಳು ಕಾರ್ಯನಿರ್ವಹಿಸಿದವು.
ಅಗ್ನಿಶಾಮಕ ದಳದ ಅಧಿಕಾರಿ ಕೆ.ಪಿ.ಶಶಿಧರ್ ನೇತೃತ್ವದಲ್ಲಿ ವೀರಭದ್ರಪ್ಪ, ಪಾಂಡುರಂಗ, ಸಂತೋಷ್, ಕುಮಾರ್, ನಾಗರಾಜ್ ಮತ್ತಿತರರು ಪಾಲ್ಗೊಂಡಿದ್ದರು.
ರು. 2ಲಕ್ಷ ನಷ್ಟ: ಅಂತಿಮವಾಗಿ ರಾತ್ರಿ 8.45ರ ಹೊತ್ತಿನಲ್ಲಿ ಬೆಂಕಿ ನಿಯಂತ್ರಣಕ್ಕೆ ಬಂದಿತು. ಅಷ್ಟರಲ್ಲಾಗಲೇ ಅಪಾರ ಪ್ರಮಾಣದ ನೋಟ್ ಪುಸ್ತಕಗಳು ಭಸ್ಮವಾಗಿದ್ದವು.
ಸುಮಾರು ಎರಡು ಲಕ್ಷ ರುಪಾಯಿ ಮೌಲ್ಯದ ನೋಟ್ ಪುಸ್ತಕ, ಲೇಖನ ಸಾಮಗ್ರಿ ಸುಟ್ಟಿಹೋಗಿರಬಹುದೆಂದು ಅಂದಾಜಿಸಲಾಗಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

