ಶಿವಮೊಗ್ಗ

ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆ ಫಲಿತಾಂಶ

Published On :

ಶಿವಮೊಗ್ಗ: ನಗರದ ಸಂಸ್ಕೃತ ಭಾರತೀ ಮತ್ತು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಆಶ್ರಯದಲ್ಲಿ ನಡೆದ 23ನೇ ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಕ್ರಮವಾಗಿ ಶೃಂಗೇರಿಯ ರಾಜೀವಗಾಂಧಿ ಕೇಂದ್ರೀಯ ವಿದ್ಯಾಲಯದ ಸೂರ್ಯ ಹೆಬ್ಬಾರ್ ಮತ್ತು ಉಮಾಮಹೇಶ್ವರ ಪಡೆದುಕೊಂಡರು.  ತೃತೀಯ ಸ್ಥಾನ ಸಿರಸಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾ ಹೆಗಡೆ, ನಾಲ್ಕನೇ ಸ್ಥಾನವನ್ನು ಆದಿಚುಂಚನಗಿರಿ ಕಾಲಭೈರವೇಶ್ವರ ವೇದ ಆಗಮ ಸಂಸ್ಕೃತ ಕಾಲೇಜಿನ ಕೆ.ಡಿ. ಹನುಮಂತರಾಯ, ಐದನೇ ಸ್ಥಾನವನ್ನು ಉಡುಪಿ ಎಸ್.ಎಮ್.ಎಸ್.ಪಿ. ಕಾಲೇಜಿನ ರಾಮರಂಜನ್, ಆರನೇ ಸ್ಥಾನವನ್ನು ಬೆಂಗಳೂರಿನ ಪೂರ್ಣಪ್ರಜ್ಞ ಸಂಸ್ಕೃತ ಪಾಠಶಾಲೆಯ ಗುರುಪವನ್ ಗಳಿಸಿದರು.  ಸ್ಪರ್ಧೆ ನಂತರ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಶಾಸಕ ಕೆ.ಬಿ. ಪ್ರಸನ್ನಕುಮಾರ್, ವಿಧಾನಪರಿಷತ್ ಸದಸ್ಯ ಭಾನುಪ್ರಕಾಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.