ಶಿವಮೊಗ್ಗ

ಅತಿವೃಷ್ಟಿ: ಹೆಚ್ಚಿನ ಪರಿಹಾರಕ್ಕೆ ಕೆಜೆಪಿ ಆಗ್ರಹ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಸೆ.2
ಅತಿವೃಷ್ಟಿಯಿಂದ ಹಾನಿಗೀಡಾದ ಬೆಳೆಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಕೆಜೆಪಿ ಕಾರ್ಯಕರ್ತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಳೆದ ಮೂರು ತಿಂಗಳುಗಳ ಕಾಲ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಸುರಿದ ಮಳೆಯಿಂದಾಗಿ ಅತಿವೃಷ್ಟಿ ಉಂಟಾಗಿದ್ದು, ಈ ಭಾಗದ ಪ್ರಮುಖ ಕೃಷಿ ಬೆಳೆಗಳಾದ ಅಡಕೆ, ಮೆಕ್ಕೆಜೋಳ, ಹತ್ತಿ ಮುಂತಾದ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಹೀಗಾಗಿ ರೈತರನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಈ ಭಾಗದ ರೈತರ ಪ್ರಮುಖ ಆರ್ಥಿಕ ಬೆಳೆಯಾದ ಅಡಕೆಗೆ ಕೊಳೆ ರೋಗ ಬಾಧಿಸಿ ಹೆಚ್ಚು ನಷ್ಟ ಸಂಭವಿಸಿದೆ. ಕೊಳೆ ರೋಗದಿಂದ ಹಾನಿಗೀಡಾದ ತೋಟಗಳಿಗೆ ಸರ್ಕಾರ ನೀಡುವ ಪರಿಹಾರ ಕಡಿಮೆಯಾಗಿದ್ದು, ಕೂಡಲೇ ಪ್ರತಿ ಎಕರೆಗೆ 50 ಸಾವಿರ ರುಪಾಯಿ  ನೀಡಬೇಕೆಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿದ್ದು, ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಜೀವನದ ಮೇಲೆ ಗಧಾ ಪ್ರಹಾರ ನಡೆಸಿದಂತಾಗಿದೆ. ಈ ಬೆಳವಣಿಗೆಯಿಂದ ಜನ ಸಾಮಾನ್ಯನ ಜೀವನವೇ ಕಷ್ಟವಾಗಿದೆ. ಕೂಡಲೇ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಹಿಂಪಡೆಯುವಂತೆ ರಾಷ್ಟ್ರಪತಿಯವರು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ಪುರುಷೋತ್ತಮ, ಬಿಳಕಿ ಕೃಷ್ಣಮೂರ್ತಿ, ನಗರಸಭಾ ಸದಸ್ಯ ಐಡಿಯಲ್ ಗೋಪಿ, ಗೌರಿ ಶ್ರೀನಾಥ್, ಮಂಜುನಾಥ್, ಮಾಲತೇಶ್, ಗೀತಾ, ಶಂಶಾದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.