ಸಂಸ್ಕೃತ ಪ್ರಾಚೀನ ವೈಜ್ಞಾನಿಕ ಭಾಷೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಸೆ.2
ಸಂಸ್ಕೃತ ಅತ್ಯಂತ ಪ್ರಾಚೀನ ಹಾಗೂ ವೈಜ್ಞಾನಿಕ ಭಾಷೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅಭಿಪ್ರಾಯಪಟ್ಟರು.
ನಗರದ ಸಂಸ್ಕೃತ ಭಾರತೀ ಮತ್ತು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಆಶ್ರಯದಲ್ಲಿ ಸಂಸ್ಕೃತ ಭವನದಲ್ಲಿ ನಡೆದ 23ನೇ ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆಯ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಸ್ಕೃತವನ್ನು ಬೆಳೆಸುವ ಕೆಲಸದಲ್ಲಿ ಎಲ್ಲಾ ಭಾರತೀಯರ ಭಾಗಿಯಾಗಬೇಕು, ಇದರಿಂದ ನಾವು ನಮ್ಮ ಸಂಸ್ಕೃತಿಯನ್ನು ಉಳಿಸಿದಂತಾಗುತ್ತದೆ ಎಂದರು.
ಸಂಸ್ಕೃತವು ಭಾರತದ ಮೂಲ ಭಾಷೆಯಾಗಿದ್ದು ಎಲ್ಲಾ ಭಾರತೀಯರು ಸಂಸ್ಕೃತವನ್ನು ಕಲಿಯಬೇಕು ಎಂದು ಕರೆ ನೀಡಿದರು. ವಿಧಾನ ಪರಿಷತ್ ಸದಸ್ಯ ಎಮ್.ಬಿ. ಭಾನುಪ್ರಕಾಶ್ ಮಾತನಾಡಿ, ಪುರಾತನ ಭಾಷೆಯಾದ ಸಂಸ್ಕೃತವು ಯಾವಾಗ ಹುಟ್ಟಿತು ಎಂಬುದಕ್ಕೆ ದಾಖಲೆ ಇಲ್ಲ. ಸನಾತನ ಕಾಲದಿಂದಲು ಇಂದಿಗೂ ಸಂಸ್ಕೃತ ಎಲ್ಲರಿಗೂ ಬೇಕಾದ ಭಾಷೆಯಾಗಿದೆ ಎಂದರು.
ಇಂದು ಸಂಸ್ಕೃತ ಭಾಷೆಯನ್ನು ಕಲಿಯುತ್ತಿರುವ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸಂಸ್ಕೃತವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ನಮ್ಮ ಋಷಿ ಮುನಿಗಳು ತಮ್ಮ ಗ್ರಂಥಗಳಲ್ಲಿ ಬರೆದಿಟ್ಟಿರುವ ವಿಜ್ಞಾನವನ್ನು ಜಗತ್ತಿಗೆ ಕೊಡುವಂತಹ ಕೆಲಸ ಮಾಡಬೇಕಾಗಿದೆ ಎಂದು ಕರೆ ನೀಡಿದರು.
ಸ್ವರ್ಣವಲ್ಲಿ ಸಂಸ್ಕೃತ ಪಾಠಶಾಲೆಯ ರವಿಶಂಕರ ವೇದ ಘೋಷ ಮಾಡಿದರು, ರಚನಾ ಪ್ರಾರ್ಥಿಸಿ, ಸಂಸ್ಕೃತ ಭಾರತೀ ನಗರದ ಸಂಯೋಜಕ ಟಿ.ವಿ. ನರಸಿಂಹ ಮೂರ್ತಿ ಸ್ವಾಗತಿಸಿದರು. ಡಾ.ಎಮ್.ಕೆ. ಶ್ರೀಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದ ಸಂಸ್ಕೃತ ಪ್ರಾಧ್ಯಾಪಕ ಶಿವರಾಮ ಭಟ್ಟ ನಿರ್ಣಾಯಕರ ಅನುಭವ ಹಂಚಿಕೊಂಡರು.
ವೇದಿಕೆಯಲ್ಲಿ ಸಂಸ್ಕೃತ ಭಾರತೀ ಜಿಲ್ಲಾ ಅಧ್ಯಕ್ಷ ಭಾಸ್ಕರ್ ಜಿ ಕಾಮತ್, ಸಂಸ್ಕೃತ ಭಾರತೀ ಪ್ರಾಂತ ಮಂತ್ರಿ ಮತ್ತೂರು ಶ್ರೀನಿಧಿ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಯ ಅಧ್ಯಕ್ಷ ಎಮ್. ಮಾಧವಾಚಾರ್ ವಹಿಸಿದ್ದರು, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅ.ನಾ. ವಿಜಯೇಂದ್ರ ರಾವ್, ಕೋಶಾಧ್ಯಕ್ಷ ಆ.ಚಿ.ಪ್ರಕಾಶ್ ಸ್ಪರ್ದಾರ್ಥಿಗಳೊಂದಿಗೆ ಸಂವಾದ ನಡೆಸಿಕೊಟ್ಟರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

