ಇಂದು ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ
ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾಡಳಿತ ಮತ್ತು ಜಿಪಂ ಆಶ್ರಯದಲ್ಲಿ ಸೆ. 5ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಆಚರಿಸುತ್ತಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಸಕ್ತ ಸಾಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭ ಉದ್ಘಾಟಿಸುವರು. ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹಾಗೂ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉಪಸ್ಥಿತರಿರುವರು. ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸುವರು. ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸುವರು.
ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಸೇರಿದಂತೆ ಜಿಲ್ಲೆಯ ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಅತಿಥಿಗಳಾಗಿ ಆಗಮಿಸಲಿರುವರು. ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಸಕಾಂತ್ ಸೆಂಥಿಲ್, ಪ.ಪೂ. ಶಿಕ್ಷಣ ಇಲಾಖೆ ನಿರ್ದೇಶಕ ಡಾ. ರಾಮೇಗೌಡ, ಪ್ರಾಥಮಿಕ ಶಿಕ್ಷಣ ನಿರ್ದೇಶಕ ಎ. ದೇವಪ್ರಕಾಶ್ ಮತ್ತು ವೀಣಾ ಆರ್. ನಾಯಕ್ ಉಪಸ್ಥಿತರಿರುವರು.
ಕಾರ್ಯಕ್ರಮದ ನಂತರ ಸಮಾರಂಭಕ್ಕೆ ಆಗಮಿಸಿದ ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಉಪಹಾರ ವ್ಯವಸ್ಥೆ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

