ಕೊಳೆರೋಗ ಪರಿಹಾರ ಘೋಷಣೆಗೆ ಆಗ್ರಹ
ಶಿವಮೊಗ್ಗ: ಜಿಲ್ಲೆಯಲ್ಲಿ ಅತಿವೃಷ್ಟಿ ಉಂಟಾಗಿ ಅಡಕೆಗೆ ಕೊಳೆ ರೋಗ ತಗುಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಕೂಡಲೇ ಅಡಕೆ ಬೆಳೆಗಾರರಿಗೆ ಪರಿಹಾರ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಅಡಕೆ ಬೆಳೆಗಾರರ ಸಂಘ ಆಗ್ರಹಿಸಿದೆ.
ಈ ಬಾರಿ ಮಳೆಯಿಂದ ಜಿಲ್ಲೆಯ ಸಾವಿರಾರು ಎಕರೆ ಅಡಕೆ ತೋಟಗಳಲ್ಲಿ ಕೊಳೆ ರೋಗ ವ್ಯಾಪಾಕವಾಗಿ ಹರಡಿದ್ದು, ಈ ಕಾರಣದಿಂದ ಕೋಟ್ಯಂತರ ರುಪಾಯಿ ನಷ್ಟ ಸಂಭಿವಿಸಿದೆ. ಕೊಳೆ ರೋಗ ಭಾದಿತ ಅಡಕೆ ತೋಟಕ್ಕೆ ಎಕರೆ ಒಂದಕ್ಕೆ 25 ಸಾವಿರ ಪರಿಹಾರ ಹಣ ಹಾಗೂ ಕೊಳೆ ರೋಗ ನಿಯಂತ್ರಣಕ್ಕೆ ಬೋರ್ಡ್ ದ್ರಾವಣ ಸಿಂಪಡಣೆಗೆ ಹೆಕ್ಟೇರ್ಗೆ 8 ಸಾವಿರ ಧನ ಸಹಾಯ ಮಂಜೂರು ಮಾಡಲು ಸಂಘ ಸರ್ಕಾರವನ್ನು ಒತ್ತಾಯಿಸಿದೆ.
ಮೂರು ವರ್ಷಗಳ ಕೃಷಿ ಸಾಲ ಮರಪಾವತಿಗೆ ವಿನಾಯಿತಿ ನೀಡಬೇಕು.
ಡಾ. ಗೋರಕ್ಸಿಂಗ್ ವರದಿ ಶಿಫಾರಸಿನಂತೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ 10 ಎಕರೆವರೆಗಿನ ಅಡಕೆ ಬೆಳೆಗಾರರ ಸಾಲ ಮನ್ನಾಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘ ಅಧ್ಯಕ್ಷ ಬಿ.ಎ. ರಮೇಶ್ ಹೆಗ್ಡೆ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

